Site icon Kannada News-suddikshana

EXCLUSIVE: ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ: ಮಾನವೀಯತೆ ಮೆರೆದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

ಎಸ್. ಎಸ್. ಮಲ್ಲಿಕಾರ್ಜುನ್

SUDDIKSHANA KANNADA NEWS/ DAVANAGERE/DATE:14_09_2025

ದಾವಣಗೆರೆ: ದಾವಣಗೆರೆ ಹೊರವಲಯದ ಜಿನ್ನೆಸಿಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರನೊಬ್ಬನನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮೂಲಕ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಮಾನವೀಯತೆ ಮೆರೆದರು.

READ ALSO THIS STORY: KSP ನೇಮಕಾತಿ 2025: 4656 ಪೊಲೀಸ್ ಕಾನ್ಸ್‌ಟೇಬಲ್, ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ತಾಲ್ಲೂಕಿನ ಅಮೃತ ನಗರದ ಮಂಜು ಎಂಬ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ರಸ್ತೆ ಪಕ್ಕದಲ್ಲಿ ಬಿದ್ದಿದ್ದರು. ಹಳೇಬಾತಿಯಿಂದ ದಾವಣಗೆರೆ ಕಡೆಗೆ ಆಗಮಿಸುತ್ತಿದ್ದ ಸಚಿವರು ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ ಮೇರೆಗೆ ಬೆಂಗವಾಲು ವಾಹನದಲ್ಲಿ ಎಆರ್‍ಎಸ್‍ಐ ದಾದಾಪೀರ್ ಮತ್ತು ಅಂಗರಕ್ಷಕ ನಟರಾಜ್ ಅವರು ಗಾಯಾಳು ಮಂಜು ಅವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ಕೊಡಿಸಿದರು.

ಚಿಕಿತ್ಸೆ ನಂತರ ಗಾಯಾಳು ಮಂಜು ಜೊತೆಗೆ ದೂರವಾಣಿ ಮೂಲಕ ಮಾತನಾಡಿದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಆರೋಗ್ಯ ವಿಚಾರಿಸಿದರು. ಸ್ಥಳದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಗಡಿಗುಡಾಳ್ ಮಂಜುನಾಥ್, ಮಾಗಾನಹಳ್ಳಿ ಪರಶುರಾಮ್, ಬುದಾಳ್ ಬಾಬು ಸೇರಿದಂತೆ ಇತರರು ಹಾಜರಿದ್ದರು.

Exit mobile version