SUDDIKSHANA KANNADA NEWS/ DAVANAGERE/DATE:22_09_2025
ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ 58ನೇ ಜನುಮದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಚಿವರ ಗೃಹದಲ್ಲಿ ಸಂಸದೆಯೂ ಆದ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್, ಪುತ್ರ ಸಮರ್ಥ್ ಶಾಮನೂರು ಅವರು ಮಲ್ಲಿಕಾರ್ಜುನ್ ಅವರಿಗೆ ಕೇಕ್ ತಿನ್ನಿಸಿ ಜನುಮದಿನದ ಶುಭಾಶಯ ಕೋರಿದರು.
READ ALSO THIS STORY: ಬಿಜೆಪಿಯವರು ಗ್ಯಾರಂಟಿ ಫಲಾನುಭವಿಗಳಲ್ವಾ: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಳಿಗ್ಗೆಯಿಂದಲೇ ಮನೆಗೆ ಆಗಮಿಸಿದ್ದ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಸಚಿವ ಮಲ್ಲಿಕಾರ್ಜುನ್ ಅವರಿಗೆ ಹುಟ್ಟುಹಬ್ಬದ ಶುಭ ಕೋರಿ ಹಾರೈಸಿದರು.
ವಿಶೇಷ ಪೂಜೆ:
ದಾವಣಗೆರೆಯ ಹಳೇಪೇಟೆಯಲ್ಲಿರುವ ಶ್ರೀ ಬಕ್ಕೇಶ್ವರ ದೇವಸ್ಥಾನ ಹಾಗೂ ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ಮಲ್ಲಿಕಾರ್ಜುನ್ ಅವರು ಪತ್ನಿ ಹಾಗೂ ಪುತ್ರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಂತರ ನವರಾತ್ರಿ ಹಬ್ಬದ ಮೊದಲನೇ ದಿನವಾದ ಇಂದು ದಾವಣಗೆರೆಯ ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಾಲಯದಲ್ಲಿ ದೀಪಹಚ್ಚುವ ಮೂಲಕ ನವರಾತ್ರಿಗೆ ಚಾಲನೆ ನೀಡಲಾಯಿತು.
ನವರಾತ್ರಿಯ ಮೊದಲದಿನ ತಾಯಿ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ತಾಯಿ ಶೈಲಪುತ್ರಿ ಎಲ್ಲರಿಗೂ ತಾಳ್ಮೆ,ಧೈರ್ಯ ಮತ್ತು ಶಾಂತಿಯ ಮಾರ್ಗವನ್ನು ತೋರಿಸಲಿ.ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ದೇವಿಯಲ್ಲಿ ಪ್ರಾರ್ಥಿಸಲಾಯಿತು.
ಸಾಧನ ಸಲಕರಣೆ ವಿತರಣೆ:
ಎಸ್ ಎಸ್ ಮಲ್ಲಿಕಾರ್ಜುನ್ ಅವರ 58 ನೇ ಜನ್ಮದಿನದ ಪ್ರಯುಕ್ತ ಎಸ್ ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗ ದಾವಣಗೆರೆ ಹಾಗೂ ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆ, ಸಿಆರ್ ಸಿ ದಾವಣಗೆರೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ದಾವಣಗೆರೆಯ ಶ್ರೀ ಸದ್ಯೋಜ್ಯಾತ ಮಠದಲ್ಲಿ ಇಂದು ಅಗತ್ಯವಿರುವ ಸಾಧನಸಲಕರಣೆಗಳನ್ನು ವಿತರಿಸಲಾಯಿತು.
ಇದೇ ಸೆಪ್ಟೆಂಬರ್ 10 ರಂದು ದಾವಣಗೆರೆಯ ಶಾಮನೂರು ರಸ್ತೆಯಲ್ಲಿರುವ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಹಾಗೂ ಮಾಯಕೊಂಡ ವಿಧಾನಸಭಾಕ್ಷೇತ್ರದ ವಿಶೇಷಚೇತನರಿಗೆ ಮತ್ತು 60 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಯ ಮೌಲ್ಯಮಾಪನ ಶಿಬಿರ ಆಯೋಜಿಸಲಾಗಿತ್ತು. ಈ ವೇಳೆ ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಫಲಾನುಭವಿಗಳು ಭಾಗವಹಿಸಿದ್ದರು.ಸಮಗ್ರ ಪರಿಶೀಲನೆಯ ನಂತರ ಆಯ್ಕೆಯಾದ 343 ಅರ್ಹ ಫಲಾನುಭವಿಗಳಿಗೆ ಇಂದು ಸುಮಾರು 995 ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಈ ಶಿಬಿರದಲ್ಲಿ ಒಟ್ಟಾರೆ 1200 ಮಂದಿ ಭಾಗವಹಿಸಿದ್ದರು.
ಮೊದಲ ಹಂತದಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಮತ್ತು ಮಾಯಕೊಂಡ ವಿಧನಾಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಬಿರ ಆಯೋಜಿಸಲಾಗಿದ್ದು.ಉಳಿದ ಐದು ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನದಿನಗಳಲ್ಲಿ ಶಿಬಿರ ನಡೆಸಲಾಗುವುದು. ಈ ಕಾರ್ಯಕ್ರಮದಲ್ಲಿ ಅಂಧರಿಗೆ ಮೊಬೈಲ್,ವೈಬ್ರೇಟಿಂಗ್ ಸ್ಟಿಕ್ ಹಾಗೂ ಅಗ ವೀಲ್ ಚೇರ್,ತ್ರಿಚಕ್ರ ವಾಹನ ಸೇರಿದಂತೆ ಸುಮಾರು 28.82 ಲಕ್ಷ ಮೌಲ್ಯದ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.