SUDDIKSHANA KANNADA NEWS/ DAVANAGERE/ DATE:02-04-2025
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಒಂದಿಲ್ಲೊಂದು ದರ ಏರಿಕೆಯ ಬರೆ ಎಳೆಯುತ್ತಲೇ ನಾಡಿನ ಜನರನ್ನು ತನ್ನ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ದರ ಏರಿಕೆಯ ಕೂಪಕ್ಕೆ ತಳ್ಳುತ್ತಿರುವ ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬೃಹತ್ ಅಹೋರಾತ್ರಿ ಧರಣಿ ನಡೆಸಲಾಯಿತು.
ಹಾಲು, ಮೊಸರು, ವಿದ್ಯುತ್,ಆಟೋ ಮೊಬೈಲ್ ಪಾರ್ಟ್ಸ್, ಬಸ್ ಪ್ರಯಾಣ ದರ, ಬೆಂಗಳೂರಿನಲ್ಲಿ ಕಸದ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಅಫಿಡವಿಟ್ ಛಾಪಾ ಕಾಗದ, ಎಟಿಎಂ ಚಾರ್ಜ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ದೈನಂದಿನ ಬದುಕಿನ ಮೇಲೆ ಹೊರೆ ಹೊರಿಸಿರುವ ಕಾಂಗ್ರೆಸ್ ಸರ್ಕಾರದ ನಿಲುವುಗಳನ್ನು ಖಂಡಿಸಿ ಎಲ್ಲಾ ದರ ಏರಿಕೆಯ ನಿರ್ಧಾರಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯ ಸಹ ಉಸ್ತುವಾರಿಗಳಾದ ಸುಧಾಕರ ರೆಡ್ಡಿ, ಪ್ರತಿಪಕ್ಷ ನಾಯಕ ಆರ್. ಅಶೋಕ,
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.