• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ

Editor by Editor
June 3, 2025
in ದಾವಣಗೆರೆ, ಬೆಂಗಳೂರು
0
ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ

SUDDIKSHANA KANNADA NEWS/ DAVANAGERE/ DATE-03-06-2025

ಶಿವಮೊಗ್ಗ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ 2025 ರ ಜುಲೈ 15 ರೊಳಗೆ ತಲುಪುವಂತೆ ಕಳುಹಿಸಬೇಕು.

2024 ನೆಯ ವರ್ಷದ ಅತ್ಯುತ್ತಮ ಕೃತಿಗಳಿಗೆ ಬಹುಮಾನ:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2024ನೆಯ ವರ್ಷದ ಪುಸ್ತಕ ಬಹುಮಾನ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2024ರ ಜನವರಿ 1 ರಿಂದ 2024ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ
ಮುದ್ರಣ 2024 ಎಂದು ಮುದ್ರಿತವಾಗಿರಬೇಕು.

ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು. (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ), ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ  ಬಹುಮಾನಗಳಿಗಾಗಿ), ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ)(ಅಕಾಡೆಮಿ ಮಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ / ಆತ್ಮಕಥೆ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜ್ಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ) /

ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ / ಅಂಕಣ ಬರಹ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಬಿ.ವಿ. ವೀರಭದ್ರಪ್ಪ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-1 (ಇಂಗ್ಲಿಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು (ಎಲ್. ಗುಂಡಪ್ಪ
ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-2 (ಕನ್ನಡದಿಂದ ಭಾರತೀಯ ಭಾಷೆಗಳಿಗೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು), ಲೇಖಕರ ಮೊದಲ ಸ್ವತಂತ್ರಕೃತಿ (2024ರಲ್ಲಿ ಮುದ್ರಣಗೊಂಡ ಮೊದಲ ಸ್ವತಂತ್ರಕೃತಿ. ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು.)

(ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ) (ಕಾವ್ಯ ಪ್ರಕಾರವನ್ನು ಹೊರತುಪಡಿಸಿ), ಕನ್ನಡದಿಂದ ಇಂಗ್ಲಿಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ), ದಾನ
ಸಾಹಿತ್ಯ (ದಾಸ ಸಾಹಿತ್ಯಕುರಿತ ಸೃಜನ/ ಸೃಜನೇತರ ಕೃತಿಗಳು) (ಶ್ರೀಮತಿ ಜಲಜಾ ಶ್ರೀಪತಿ ಆಚಾರ್ಯಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು), ಗಜಲ್ ಕಾವ್ಯ (ನಾಡೋಜ ಡಾ. ಶಾಂತರಸ ಗಜಲ್ ಕಾವ್ಯ ದತ್ತಿ ಬಹುಮಾನಕ್ಕಾಗಿ).

ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು: ಮರುಮುದ್ರಣವಾದ ಪುಸ್ತಕಗಳು. ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು. ಪಠ್ಯಪುಸ್ತಕಗಳು. ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು. ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು. ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು.

ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.

ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದೆAದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್ ತಿಳಿಸಿದ್ದಾರೆ.

Next Post
48 ಗಂಟೆಗಳ ದಾಳಿ ಪಾಕ್ ದಾಳಿಯನ್ನ ಕೇವಲ 8 ಗಂಟೆಗಳಲ್ಲಿ ಕೊನೆಗೊಳಿಸಿದೆವು: ಅನಿಲ್ ಚೌಹಾಣ್ ಸ್ಫೋಟಕ ಮಾಹಿತಿ..!

48 ಗಂಟೆಗಳ ದಾಳಿ ಪಾಕ್ ದಾಳಿಯನ್ನ ಕೇವಲ 8 ಗಂಟೆಗಳಲ್ಲಿ ಕೊನೆಗೊಳಿಸಿದೆವು: ಅನಿಲ್ ಚೌಹಾಣ್ ಸ್ಫೋಟಕ ಮಾಹಿತಿ..!

Leave a Reply Cancel reply

Your email address will not be published. Required fields are marked *

Recent Posts

  • ಮನೆಯ ವಾಸ್ತು ಶಾಸ್ತ್ರದ ನಿರ್ಮಾಣದ ಮಾಹಿತಿ
  • ನಿಮ್ಮ ಜಾತಕದಲ್ಲಿ ಯಾವ ದಶಾಭುಕ್ತಿ ಇದ್ದರೆ ಒಳ್ಳೆಯದು!
  • ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 39.7 ಅಡಿ ಅಷ್ಟೇ ಬೇಕು!
  • ಏಕದಿನ ನಿವೃತ್ತಿಯ ನಂತರ ಫಾರ್ಮ್ ಗೆ ಮರಳಿದ ಮ್ಯಾಕ್ಸ್‌ವೆಲ್: ವಾಷಿಂಗ್ಟನ್ ಫ್ರೀಡಂಗೆ ಭಾರೀ ಗೆಲುವು
  • ಇಸ್ರೇಲ್ – ಇರಾನ್ ಸಂಘರ್ಷ: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ನಷ್ಟ ಎದುರಿಸುವ ಭಯದಲ್ಲಿ ರಷ್ಯಾ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In