Site icon Kannada News-suddikshana

ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಕೇಸ್: ಶಂಕಿತ ಆರೋಪಿ ವಶಕ್ಕೆ ಪಡೆದು ವಿಚಾರಣೆ, ಮಹತ್ವದ ಸುಳಿವು ಲಭ್ಯ?

SUDDIKSHANA KANNADA NEWS/ DAVANAGERE/ DATE:17-01-2025

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಮುಂಬೈನ ಬಾಂದ್ರಾದಲ್ಲಿನ ಸೈಫ್ ಮನೆಯಲ್ಲಿ ನಡೆದ ದಾಳಿಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಶುಕ್ರವಾರ ಒಬ್ಬ ಶಂಕಿತನನ್ನು ವಶಕ್ಕೆ ಪಡೆದು ಮಹತ್ವದ ಮಾಹಿತಿ ಕಲೆಹಾಕುತ್ತಿದ್ದಾರೆ.

ಮುಂಬೈನ ಬಾಂದ್ರಾದಲ್ಲಿ ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ಚಾಕುವಿನಿಂದ ಇರಿದಿದ್ದ. ಫೈರ್ ಎಸ್ಕೇಪ್ ಮೆಟ್ಟಿಲುಗಳ ಮೂಲಕ ಸೈಫ್ ಮನೆಗೆ ನುಗ್ಗಿದ್ದ ಆರೋಪಿ ದಾಳಿಯ ನಂತರ ಪರಾರಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಲು
ಮುಂಬೈ ಪೊಲೀಸರು ಇಪ್ಪತ್ತು ತಂಡಗಳನ್ನು ರಚಿಸಿದ್ದರು.

ಮೂಲಗಳ ಪ್ರಕಾರ, ಮುಂಬೈ ಪೊಲೀಸರು ಗುರುವಾರ ರಾತ್ರಿ ಬಾಂದ್ರಾ ಪೊಲೀಸ್ ಠಾಣೆಗೆ ಹಲವಾರು ಶಂಕಿತರನ್ನು ವಿಚಾರಣೆಗೆ ಕರೆತಂದರು. ಸೈಫ್ ಅಲಿ ಖಾನ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಅವರಲ್ಲಿ
ಒಬ್ಬನನ್ನು ಪೊಲೀಸರು ನಂತರ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜನವರಿ 16 ರಂದು ಗುರುವಾರ ಮುಂಜಾನೆ 2.30 ರ ಸುಮಾರಿಗೆ ಸೈಫ್ ಅಲಿ ಖಾನ್ ಅವರ ಬಾಂದ್ರಾ ಮನೆಯಲ್ಲಿ ಅಪರಿಚಿತ ವ್ಯಕ್ತಿಯಿಂದ ಕನಿಷ್ಠ ಆರು ಬಾರಿ ಇರಿತಕ್ಕೆ ಸೈಫ್ ಒಳಗಾಗಿದ್ದರು. ದಾಳಿಯ ನಂತರ, ಸೈಫ್ ಅವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ವೈದ್ಯರ ಪ್ರಕಾರ, ಶಸ್ತ್ರಚಿಕಿತ್ಸೆಯ ನಂತರ ಅವರು ಅಪಾಯದಿಂದ ಪಾರಾಗಿದ್ದಾರೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

Exit mobile version