Site icon Kannada News-suddikshana

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು ಯಾಕೆ ಗೊತ್ತಾ?

SUDDIKSHANA KANNADA NEWS/ DAVANAGERE/ DATE:16-01-2025

ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿರುವ ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ.

ಸೈಫ್ ಅಲಿ ಖಾನ್ ಮನೆ ದರೋಡೆಗೆ ಬಂದಿದ್ದ ದರೋಡೆಕೋರ ಮನೆ ಕಳ್ಳತನ ಮಾಡುವಾಗ ಸೈಫ್ ಅಲಿ ಖಾನ್ ಬಂದಿದ್ದಾರೆ. ಈ ವೇಳೆ ಚಾಕುವಿನಿಂದ ಚುಚ್ಚಿದ್ದಾನೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ಗುರುವಾರ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ ಎರಡರಿಂದ ಮೂರು ಬಾರಿ ಇರಿದಿದ್ದಾನೆ. ದಾಳಿಯ ನಂತರ, ಸೈಫ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಪೊಲೀಸರ ಪ್ರಕಾರ, ಆರೋಪಿ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಮನೆಯಲ್ಲಿ ಕಳ್ಳತನಕ್ಕೆ ಮುಂದಾಗಿದ್ದಾಗ ಮನೆಯ ಸೇವಕರೊಬ್ಬರ ಜೊತೆ ಜಗಳಕ್ಕಿಳಿದಿದ್ದ ದರೋಡೆಕೋರ ಭೀತಿ ಹುಟ್ಟಿಸಿದ್ದ. ಈ ವೇಳೆ ಮಧ್ಯಪ್ರವೇಶಿಸಿದ ಸೈಫ್ ಅಲಿ ಖಾನ್ ಅವರಿಗೆ ಆರೋಪಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಆರೋಪಿಯನ್ನು ಪತ್ತೆಹಚ್ಚಲು ಮತ್ತು ಆತನ ಬಂಧನಕ್ಕೆ ಮುಂಬೈ ಪೊಲೀಸರು ಬಲೆ ಬೀಸಿದ್ದಾರೆ.

ನಿನ್ನೆ ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ನಟ ಸೈಫ್ ಅಲಿಖಾನ್ ನಿವಾಸಕ್ಕೆ ನುಗ್ಗಿ ಆತನ ಸೇವಕರೊಬ್ಬರ ಜೊತೆ ಜಗಳವಾಡಿದ್ದಾನೆ. ನಟ ಮಧ್ಯಪ್ರವೇಶಿಸಿ ಆ ವ್ಯಕ್ತಿಯನ್ನು ಸಮಾಧಾನಪಡಿಸಲು ಯತ್ನಿಸಿದಾಗ ಸೈಫ್ ಅಲಿಖಾನ್ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. .

Exit mobile version