Home ದಾವಣಗೆರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಭದ್ರತಾ ನಿರತ ಮುಂಬೈ ಪೊಲೀಸ್ ಪೇದೆ ಸಾವು! ಏನಾಯ್ತು? ಯಾಕಾಯ್ತು?
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರುಸಿನಿಮಾ

ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಭದ್ರತಾ ನಿರತ ಮುಂಬೈ ಪೊಲೀಸ್ ಪೇದೆ ಸಾವು! ಏನಾಯ್ತು? ಯಾಕಾಯ್ತು?

Share
ಸಲ್ಮಾನ್ ಖಾನ್
Share

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನಿವಾಸದ ಹೊರಭಾಗದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಮುಂಬೈ ಮೂಲದ ಪೊಲೀಸ್ ಕಾನ್ಸ್‌ಸ್ಟೇಬಲ್ ಒಬ್ಬರು ಭಾನುವಾರ ದಿಢೀರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ಮುಂಬೈ ಪೊಲೀಸ್ ಪಡೆಯ ಎಲ್‌ಎ-4 (LA-4) ವಿಭಾಗಕ್ಕೆ ಸೇರಿದ್ದ 41 ವರ್ಷದ ಗಣೇಶ್ ರಾಯಟೆ ಎಂದು ಗುರುತಿಸಲಾಗಿದೆ. ಈ ಹಿಂದೆ ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಇವರು, ಬಳಿಕ ಮುಂಬೈ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.

ಘಟನೆಯ ವಿವರ:

ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಎದುರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗಣೇಶ್ ರಾಯಟೆ ಅವರಿಗೆ ದಿಢೀರ್ ಎದೆನೋವು ಹಾಗೂ ಅಸ್ವಸ್ಥತೆ ಕಾಣಿಸಿಕೊಂಡು ನೆಲಕ್ಕೆ ಕುಸಿದುಬಿದ್ದರು. ತಕ್ಷಣವೇ ಸ್ಥಳದಲ್ಲಿದ್ದ ಸಹೋದ್ಯೋಗಿ ಪೊಲೀಸರು ಅವರನ್ನು ಸಮೀಪದ ಭಾಭಾ ಆಸ್ಪತ್ರೆಗೆ ದಾಖಲಿಸಿದರಾದರೂ, ಪರೀಕ್ಷಿಸಿದ ವೈದ್ಯರು ಅವರು ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿರುವುದಾಗಿ ಘೋಷಿಸಿದರು. ಪ್ರಾಥಮಿಕ ವರದಿಗಳ ಪ್ರಕಾರ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಕರೆಗಳು ಹಾಗೂ ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಹಾಗೂ ಅವರ ನಿವಾಸಕ್ಕೆ ವೈ-ಪ್ಲಸ್ (Y+) ದರ್ಜೆಯ ಕಟ್ಟುನಿಟ್ಟಿನ ಭದ್ರತೆಯನ್ನು ಒದಗಿಸಲಾಗಿದೆ. ಏಪ್ರಿಲ್ 2024ರಲ್ಲಿ ಅವರ ನಿವಾಸದ ಹೊರಭಾಗದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆಯ ನಂತರ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿತ್ತು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles