Home ದಾವಣಗೆರೆ ಕಟ್ಟಕಡೆಯ ವ್ಯಕ್ತಿಗೂ ಸ್ವಾವಲಂಬಿ ಬದುಕು ನೀಡಿದ್ದೇ ಕಾಂಗ್ರೆಸ್ ಸಾಧನೆ: ಸಮರ್ಥ್ ಶಾಮನೂರು
ದಾವಣಗೆರೆಬೆಂಗಳೂರು

ಕಟ್ಟಕಡೆಯ ವ್ಯಕ್ತಿಗೂ ಸ್ವಾವಲಂಬಿ ಬದುಕು ನೀಡಿದ್ದೇ ಕಾಂಗ್ರೆಸ್ ಸಾಧನೆ: ಸಮರ್ಥ್ ಶಾಮನೂರು

Share
ಕಾಂಗ್ರೆಸ್
Share

ದಾವಣಗೆರೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ವಾವಲಂಬಿ ಬದುಕು ಸಿಗಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಧ್ಯೇಯವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನಜೀವನ ಸುಧಾರಿಸುವಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹೇಳಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮೀಣಭಾಗಗಳಾದ ಹನುಮಂತಾಪುರ, ಹೊಸ ಬೆಳವನೂರು, ಹಳೇ ಬೆಳವನೂರು, ಉಜ್ಜೇನಿಪುರ, ತುರ್ಚಘಟ್ಟ, ಚಂದ್ರನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಏಪ್ರಿಲ್ – 9 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬೆಂಬಲಿಸಬೇಕೆಂದು ಮನವಿ ಮಾಡಿದರು.

ನಾವು ಸರ್ವಜನಾಂಗದ ಶಾಂತಿಯ ತೋಟ ಎಂಬ ತತ್ವವನ್ನು ಅಳವಡಿಸಿಕೊಂಡಿದ್ದೇವೆ. ದಾವಣಗೆರೆ ಜಿಲ್ಲೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುವಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ ಪಕ್ಷ ಕಾಂಗ್ರೆಸ್ ಮಾತ್ರ ಎಂದರು.

ಈ ವೇಳೆ ಗ್ರಾಮೀಣಭಾಗದ ಮುಖಂಡರುಗಳು,ಕಾರ್ಯಕರ್ತರು, ಅಭಿಮಾನಿಗಳು ಇದ್ದರು

Share

Leave a comment

Leave a Reply

Your email address will not be published. Required fields are marked *