ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಬಿ ಫಾರಂ ಅನ್ನು ಪುತ್ರ ಸಮರ್ಥ್ ಶಾಮನೂರು ಅವರಿಗೆ ತರುವಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿಸಿಎಂ ಡಿ. ಕೆ. ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಸೇರಿದಂತೆ ದಾವಣಗೆರೆ ದಕ್ಷಿಣ ಉಪಚುನಾವಣೆಯ ಉಪಸಮಿತಿಯ ಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯ ಬಳಿಕ ಬಿ ಫಾರಂ ಅನ್ನು ಸಮರ್ಥ್ ಶಾಮನೂರು ಅವರಿಗೆ ಕೊಡಲಾಗಿದೆ. ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಪುತ್ರ ಸ್ಪರ್ಧೆ ಮಾಡಲು ಬಿ ಫಾರಂ ಅನ್ನು ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ನೀಡಲಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಅವರಿಗೆ ಬಿ ಫಾರಂ ನೀಡಲಾಗಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಸಮರ್ಥ್ ಶಾಮನೂರು
ಅವರು ಸೋಮವಾರ ಅಂದರೆ ಮಾರ್ಚ್ 23, 2026 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಸಹಸ್ರ ಸಹಸ್ರ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು, ಹಿತೈಷಿಗಳ ಸಮ್ಮುಖದಲ್ಲಿ ಭರ್ಜರಿ ರ್ಯಾಲಿ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಮೂಲಕ ಶಾಮನೂರು ಶಿವಶಂಕರಪ್ಪರ ಮೊಮ್ಮಗನಿಗೆ ಟಿಕೆಟ್ ಅಧಿಕೃತವಾಗಿ ಸಿಕ್ಕಂತಾಗಿದೆ.







Leave a comment