Home ದಾವಣಗೆರೆ ನಿಮ್ಮ ಸೇವೆಗೊಂದು ಅವಕಾಶ ನೀಡಿ, ಯುವ ನಾಯಕತ್ವಕ್ಕೆ ಸಾಕ್ಷಿಯಾಗಲಿ ನಮ್ಮ ಕ್ಷೇತ್ರ: ಸಮರ್ಥ್ ಶಾಮನೂರು
ದಾವಣಗೆರೆಬೆಂಗಳೂರು

ನಿಮ್ಮ ಸೇವೆಗೊಂದು ಅವಕಾಶ ನೀಡಿ, ಯುವ ನಾಯಕತ್ವಕ್ಕೆ ಸಾಕ್ಷಿಯಾಗಲಿ ನಮ್ಮ ಕ್ಷೇತ್ರ: ಸಮರ್ಥ್ ಶಾಮನೂರು

Share
ಕ್ಷೇತ್ರ
Share

ದಾವಣಗೆರೆ: ಕಾಂಗ್ರೆಸ್ ಪಕ್ಷವು ಜಾರಿಮಾಡಿದ 5 ಗ್ಯಾರಂಟಿ ಯೋಜನೆಗಳ ಫಲವಾಗಿ ಜನರು ನೆಮ್ಮದಿಯಿಂದ ಬದುಕಲು ಕಾರಣವಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹೇಳಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರದ ಡಿ.ಸಿ.ಎಂ ಟೌನ್ ಶಿಪ್, ನೀಲಮ್ಮನ ತೋಟ, ಗಣೇಶ ಲೇಔಟ್, ಬಸಾಪುರ, ಅಮರಪ್ಪನ ತೋಟ ಸೇರಿದಂತೆ ಹಲವು ಭಾಗಗಳಲ್ಲಿ ಕಾಲ್ನಡಿಗೆಯ ಮೂಲಕ ಮತಯಾಚನೆ ಮಾಡಿ ಏಪ್ರಿಲ್ – 9 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಅವರು ನಮ್ಮ ಗ್ಯಾರಂಟಿ ಯೋಜನೆಗಳೇ ನಮ್ಮ ಗೆಲುವಿಗೆ ಕಾರಣವಾಗಲಿವೆ.ಜನ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ನಮ್ಮ ಕಾಂಗ್ರೆಸ್ ಸರ್ಕಾರ. ಒಂದು ಊರಿಗೆ ನಾವು ಭೇಟಿ ಕೊಟ್ಟರೆ, ಐವತ್ತು ಜನರಿಂದ ಪ್ರಚಾರ ಆರಂಭಿಸಿದರೆ, ಆ ಪ್ರಚಾರದ ಕೊನೆಯಲ್ಲಿ ನೂರಾರು ಜನ ಸ್ವಯಂಪ್ರೇರಿತರಾಗಿ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಸಮಸ್ಯೆಗಳು, ಬೇಡಿಕೆಗಳನ್ನು ನಮ್ಮ ಮುಂದಿಡುತ್ತಿದ್ದಾರೆ. ಇನ್ನು ನನ್ನ ಮೇಲೆ ಸಾಕಷ್ಟು ತಾಯಂದಿರ ಆಶೀರ್ವಾದ ಇದ್ದು, ತಮ್ಮ ಪುತ್ರನನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಿದರು.

ಇದೇ ಏಪ್ರಿಲ್ 9 ರಂದು ನಡೆಯುವ ಉಪಚುನಾವಣೆಯಲ್ಲಿ ಕ್ರಮ ಸಂಖ್ಯೆ- 3 ಹಸ್ತದ ಗುರುತಿಗೆ ನಿಮ್ಮ ಮತ ನೀಡಿ ನನ್ನನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.ಈ ವೇಳೆ ಗ್ರಾಮೀಣಭಾಗದ ಮುಖಂಡರುಗಳು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು

ನಿಮ್ಮ ಸೇವೆಗೊಂದು ಅವಕಾಶ ನೀಡಿ…”ಯುವ ನಾಯಕತ್ವಕ್ಕೆ ಸಾಕ್ಷಿಯಾಗಲಿ ನಮ್ಮ ಕ್ಷೇತ್ರ.”

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶಾಮನೂರು ಶಿವಶಂಕರಪ್ಪನವರ ಆರಾಧ್ಯದೈವ ಶ್ರೀ ಗುರು ಬಕ್ಕೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರು ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆಯಲ್ಲಿ ಪಾಲ್ಗೊಂಡು ಮತ ನೀಡಿ ನನ್ನನ್ನು ಗೆಲ್ಲಿಸಿ ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.

ಮೆರವಣಿಗೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ತೆಲಂಗಾಣ ಸಚಿವರು ಹಾಗೂ ಮಾಜಿ ಕ್ರಿಕೆಟ್ ತಾರೆ ಅಜರುದ್ದೀನ್ ಸೇರಿದಂತೆ ಹಲವು ನಾಯಕರು ಮತ್ತು ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles