ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ನೇತೃತ್ವದಲ್ಲಿ ಗುರುವಾರ ಬೃಹತ್ ರೋಡ್ ಶೋ ನಡೆಸಲಾಯಿತು.
ನಗರದ ಕಾಯಿಪೇಟೆಯ ಬಸವೇಶ್ವರ ದೇವಸ್ಥಾನದಲ್ಲಿ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರ್ಯಾಲಿಗೆ ಚಾಲನೆ ನೀಡಲಾಯಿತು. ರ್ಯಾಲಿಯು ದೊಡ್ಡಪೇಟೆ, ವಿಠ್ಠಲ ಮಂದಿರ ರಸ್ತೆ, ಮದೀನಾ ಸರ್ಕಲ್, ಆಜಾದ್ ನಗರ ಮತ್ತು ಬಾಷಾನಗರದಂತಹ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ದಾವಣಗೆರೆಯ ಜನರ ಆಶೀರ್ವಾದವೇ ಸಮರ್ಥ್ ಅವರ ಗೆಲುವಿನ ಶಕ್ತಿ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಹಲವು ಪ್ರಮುಖ ನಾಯಕರು ಈ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ, ಮತದಾರರಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.





Leave a comment