Home ದಾವಣಗೆರೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿಯಾಗಿ ಆಶೀರ್ವಾದ ಪಡೆದ ಅಭ್ಯರ್ಥಿ ಸಮರ್ಥ ಶಾಮನೂರು
ದಾವಣಗೆರೆಬೆಂಗಳೂರು

ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿಯಾಗಿ ಆಶೀರ್ವಾದ ಪಡೆದ ಅಭ್ಯರ್ಥಿ ಸಮರ್ಥ ಶಾಮನೂರು

Share
ಜಮೀರ್ ಅಹ್ಮದ್ ಖಾನ್
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಅವರು ಇಂದು ರಾಜ್ಯದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಕ್ಷೇತ್ರದ ಚುನಾವಣಾ ರಾಜಕೀಯ ಕಣ ರಂಗೇರುತ್ತಿರುವ ಬೆನ್ನಲ್ಲೇ ಈ ಭೇಟಿ ನಡೆದಿದ್ದು, ಸಚಿವರ ಸಮ್ಮುಖದಲ್ಲಿ ಸಮರ್ಥ ಶಾಮನೂರು ಅವರು ಪ್ರಚಾರದ ಕಾರ್ಯತಂತ್ರಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕ್ಯಾಬಿನೆಟ್ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ದಾವಣಗೆರೆ ಲೋಕಸಭಾ ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ ಅವರು ಉಪಸ್ಥಿತರಿದ್ದರು.

ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಭ್ಯರ್ಥಿಗೆ ಶುಭ ಹಾರೈಸಿ, ಪಕ್ಷದ ಸಂಘಟನೆ ಮತ್ತು ಅಲ್ಪಸಂಖ್ಯಾತ ಮತದಾರರ ಒಲವು ಗಳಿಸುವ ಕುರಿತು ಮಹತ್ವದ ಸಲಹೆಗಳನ್ನು ನೀಡಿದರು. ಶಾಮನೂರು ಕುಟುಂಬದ ಮೂರನೇ ತಲೆಮಾರಿನ ರಾಜಕಾರಣಿಯಾಗಿ ಕಣಕ್ಕಿಳಿದಿರುವ ಸಮರ್ಥ ಅವರಿಗೆ ಈ ಭೇಟಿಯು ಹೆಚ್ಚಿನ ಬಲ ನೀಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *