Home ದಾವಣಗೆರೆ ಪುತ್ರ ಸಮರ್ಥ್ ಶಾಮನೂರು ಗೆಲುವಿನ ಬಳಿಕ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?
ದಾವಣಗೆರೆಬೆಂಗಳೂರು

ಪುತ್ರ ಸಮರ್ಥ್ ಶಾಮನೂರು ಗೆಲುವಿನ ಬಳಿಕ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

Share
ಪ್ರಭಾ ಮಲ್ಲಿಕಾರ್ಜುನ್
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಜಯಶಾಲಿಯನ್ನಾಗಿಸಿದ ಎಲ್ಲಾ ಮತದಾರರಿಗೆ ನನ್ನ ಧನ್ಯವಾದಗಳು ಎಂದು ಸಂಸದೆ ಹಾಗೂ ಸಮರ್ಥ್ ಶಾಮನೂರು ತಾಯಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಅಪ್ಪಾಜಿಯವರ ಭದ್ರಕೋಟೆಯಾದ ಕಾಂಗ್ರೆಸ್ ಪಕ್ಷವನ್ನು ಮತದಾರರು ಉಳಿಸಿಕೊಟ್ಟಿದ್ದಾರೆ. ಪಕ್ಷದ ಹಿರಿಯರು, ವರಿಷ್ಠರು,ಹಿತೈಷಿಗಳು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಡಾ.ಶಾಮನೂರು ಶಿವಶಂಕರಪ್ಪಾಜಿಯವರ ಮುಂದುವರೆದ ಅಭಿವೃದ್ಧಿ ಕೆಲಸಗಳನ್ನು ಸಮರ್ಥ್ ಅವರು ಸಮರ್ಥವಾಗಿ ಮುಂದುವರೆಸಿಕೊಂಡು ಬರಲಿದ್ದಾರೆ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತನ್ನ ಪುತ್ರನಿಗೆ ಜನರು ಆಶೀರ್ವದಿಸಿದ್ದಾರೆ. ತಂದೆ ಡಾ. ಶಾಮನೂರು ಶಿವಶಂಕರಪ್ಪರ ಮಾರ್ಗದರ್ಶನ, ಅಭಿವೃದ್ಧಿ ಪರ ಚಿಂತನೆ ಸೇರಿದಂತೆ ಅವರ ಮೇಲಿಟ್ಟಿದ್ದ ವಿಶ್ವಾಸ ತಕ್ಕಂತೆ ಮತ ಚಲಾಯಿಸಿ ಗೆಲ್ಲಿಸಿದ್ದಾರೆ. ಅವರಿಗೆ ಚಿರಋಣಿಯಾಗಿರುವ ಜೊತೆಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಸಮರ್ಥ್ ಶಾಮನೂರು ತಂದೆ ಎಸ್. ಎಸ್.
ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮರ್ಥ್ ಶಾಮನೂರುಗೆ 27 ವರ್ಷ. ನನಗೆ 28 ವರ್ಷವಾಗಿದ್ದಾಗ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಈಗ ಪುತ್ರನೂ ಉಪಚುನಾವಣೆಯಲ್ಲಿ ಗೆದ್ದಿದ್ದಾನೆ.
ಅಪ್ಪಾಜಿ ಶಾಮನೂರು ಶಿವಶಂಕರಪ್ಪರು ಆಶೀರ್ವಾದ ಮಾಡಿದ್ದಾರೆ. ಮತದಾರರೂ ಆಶೀರ್ವದಿಸಿದ್ದು, ಜನರ ಆಶೋತ್ತರಕ್ಕೆ ತಕ್ಕಂತೆ ಕೆಲಸ ನಿರ್ವಹಿಸುವ ವಿಶ್ವಾಸ ಇದೆ ಎಂದು ಹೇಳಿದರು.

ಒಂದು ಮತದಿಂದ ಗೆದ್ದರೂ ಗೆಲುವೇ. 50 ಸಾವಿರ ಮತಗಳ ಅಂತರದಲ್ಲಿ ಗೆದ್ದರೂ ಜಯವೇ. ಹಾಗಾಗಿ, ಗೆಲುವಿನ ಮುನ್ನಡೆ ಬಗ್ಗೆ ಮಾತನಾಡುವುದಿಲ್ಲ. ದಾವಣಗೆರೆ ದಕ್ಷಿಣ ಕ್ಷೇತ್ರದ ಜನರು ಕಾಂಗ್ರೆಸ್ ಬೆಂಬಲಿಸಿದ್ದು, ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಎಸ್. ಎಸ್.
ಮಲ್ಲಿಕಾರ್ಜುನ್ ಹೇಳಿದರು.

Share

Leave a comment

Leave a Reply

Your email address will not be published. Required fields are marked *