Home ಕ್ರೈಂ ನ್ಯೂಸ್ ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್‌; ಕಿಡಿಗೇಡಿಗಳ ವಿರುದ್ಧ ರೊಚ್ಚಿಗೆದ್ದ ದೊಡ್ಡಣ್ಣ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರುಸಿನಿಮಾ

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್‌; ಕಿಡಿಗೇಡಿಗಳ ವಿರುದ್ಧ ರೊಚ್ಚಿಗೆದ್ದ ದೊಡ್ಡಣ್ಣ!

Share
ದೊಡ್ಡಣ್ಣ
Share

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸಾವಿನ ವದಂತಿಗಳಿಗೆ ಸ್ವತಃ ನಟ ದೊಡ್ಡಣ್ಣ ಅವರೇ ವಿಡಿಯೋ ಸಂದೇಶದ ಮೂಲಕ ತೆರೆ ಎಳೆದಿದ್ದಾರೆ. “ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ, ಕಿಡಿಗೇಡಿಗಳು ಹರಡಿರುವ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ” ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ವೈರಲ್ ಆದ ನಕಲಿ ಪೋಸ್ಟರ್:

‘ಪಬ್ಲಿಕ್ ಫ್ರೆಂಡ್​’ ಹೆಸರಿನ ಫೇಸ್​​ಬುಕ್​​ ಪೇಜ್​​ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ‘ದೊಡ್ಡಣ್ಣ ಇನ್ನಿಲ್ಲ’ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ ಪೋಸ್ಟರ್‌ಗಳನ್ನು ಎಡಿಟ್ ಮಾಡಿ ಹರಿಬಿಡಲಾಗಿತ್ತು. ಜೂನ್ 12ರಂದು ಅವರು ನಿಧನರಾಗಿದ್ದಾರೆ ಎಂದು ದಿನಾಂಕವನ್ನೂ ನಮೂದಿಸಲಾಗಿತ್ತು. ಇದನ್ನು ನೋಡಿ ಗಾಬರಿಗೊಂಡ ದೊಡ್ಡಣ್ಣ ಅವರ ಕುಟುಂಬಸ್ಥರು, ಆಪ್ತರು ಮತ್ತು ಲಕ್ಷಾಂತರ ಅಭಿಮಾನಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಸತತವಾಗಿ ಫೋನ್ ಕರೆಗಳು ಬರಲಾರಂಭಿಸಿದಾಗ ದೊಡ್ಡಣ್ಣ ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಕಿಡಿಗೇಡಿಗಳ ವಿರುದ್ಧ ದೊಡ್ಡಣ್ಣ ಆಕ್ರೋಶ:

“ನಾನು ಸತ್ತಿಲ್ಲ, ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮನೆಯಲ್ಲಿ ಆರಾಮಾಗಿ ಟೀ ಕುಡಿಯುತ್ತಾ, ಟಿವಿ ನೋಡುತ್ತಾ ಕುಳಿತಿದ್ದೇನೆ. ನನ್ನ ಮೇಲಿನ ಅಭಿಮಾನ, ಆಶೀರ್ವಾದ ಇರುವವರೆಗೆ ನನಗೆ ಏನೂ ಆಗುವುದಿಲ್ಲ. ಕೇವಲ ಲೈಕ್ಸ್ ಮತ್ತು ಫಾಲೋವರ್ಸ್ ಗಳಿಸಲು ಇಂತಹ ವಿಕೃತ ಸುದ್ದಿ ಹರಡುವ ಅವಿವೇಕಿಗಳನ್ನು ಸುಮ್ಮನೆ ಬಿಡುವುದಿಲ್ಲ” ಎಂದು ದೊಡ್ಡಣ್ಣ ಕಿಡಿಕಾರಿದ್ದಾರೆ.

ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಬದುಕಿರುವ ಹಿರಿಯ ಚೇತನಗಳ ಬಗ್ಗೆ ಇಂತಹ ಸೂಕ್ಷ್ಮ ಹಾಗೂ ಸುಳ್ಳು ಸುದ್ದಿಗಳನ್ನು ಹರಡುವ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ಚಿತ್ರರಂಗದ ಗಣ್ಯರು ಆಗ್ರಹಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.