ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಧುವಣಗಿತ್ತಿಯಂತೆ ಸಿದ್ಧಗೊಳ್ಳುತ್ತಿದೆ ಸೂರಗೊಂಡನಕೊಪ್ಪ: ಸಂತ ಸೇವಾಲಾಲ್‍ರವರ ಜಯಂತ್ಯೋತ್ಸವಕ್ಕೆ ಸಿದ್ಧತೆ

On: February 10, 2025 8:45 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-02-2025

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ರಾಜ್ಯ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಮತ್ತು ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಬೆಂಗಳೂರು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಸಂತ ಸೇವಾಲಾಲ್‍ರವರ 286ನೇ ಜಯಂತ್ಸೋವ ಹಾಗೂ ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಉದ್ಘಾಟಿಸುವರು. ಹೊನ್ನಾಳಿ ಕ್ಷೇತ್ರದ ಶಾಸಕ ಡಿ. ಜಿ. ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್. ಡಿ. ಕುಮಾರಸ್ವಾಮಿ ಘನ ಉಪಸ್ಥಿತರಾಗಿರುವರು.

ಹಾತಿರಾಂ ಬಾವಾಜಿ ಸಭಾಂಗಣವನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಸಂತ ಸೇವಾಲಾಲ್ ಭಾವಚಿತ್ರಕ್ಕೆ ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಎಸ್. ಎಸ್. ಮಲ್ಲಿಕಾರ್ಜುನ್ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ನರೆವೇರಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಸಂತ ಸೇವಾಲಾಲ್ ವಿಹಾರವನ ಉದ್ಘಾಟಿಸುವರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಉದ್ಘಾಟಿಸುವರು. ಸೇವಾಲಾಲ್ ಸರೋವರವನ್ನು ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವ ಸಂಜಯ್ ಡಿ. ರಾಥೋಡ್ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು  ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಉಪಸ್ಥಿತರಿರುವರು.

ಶಿವಮೊಗ್ಗ ಲೋಕಸಭಾ ಸದಸ್ಯ ಹಾಗೂ ಸಂತ ಸೇವಾಲಾಲ್ ಪ್ರತಿಷ್ಠಾನದ ಸದಸ್ಯ ಬಿ.ವೈ ರಾಘವೇಂದ್ರ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಶಾಸಕರಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಶಾಸಕಾಂಗ ಪಕ್ಷದ ಉಪ ನಾಯಕ ಶಾರಾದಾ ಪೂರ್ಯಾನಾಯ್ಕ, ಔರಾದ್ ಶಾಸಕರಾದಪ್ರಭು ಬಿ. ಚವ್ಹಾಣ್ ಹಗರಿಬೊಮ್ಮನಹಳ್ಳಿ ಶಾಸಕರಾದ ನೇಮಿರಾಜ್ ನಾಯ್ಕ, ಚಿಂಚೋಳಿ ಶಾಸಕರಾದ ಡಾ ಅವಿನಾಶ್ ಜಾಧವ್,
ಹೂವಿನಹಡಗಲಿ ಶಾಸಕರಾದ ಕೃಷ್ಣನಾಯ್ಕ, ಶಿರಹಟ್ಟಿ ಶಾಸಕ ಡಾ.ಚಂದ್ರ ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಚಿದಾನಂದ. ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ ಸರ್ಜಿ, ಡಿ.ಟಿ.ಶ್ರೀನಿವಾಸ್, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್ ಜಯದೇವನಾಯ್ಕ, ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಎಸ್.ಬೀಮಾನಾಯ್ಕ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾಧ ಕಾಂತಾ ನಾಯಕ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷ ಡಾ.ಎ.ಆರ್ ಗೋವಿಂದಸ್ವಾಮಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಧ ಅಸಗೋಡು ಜಯಸಿಂಹ, ಮಾಜಿ ಸಚಿವರು ಹಾಗೂ ಉನ್ನತ ಮಟ್ಟದ ಸಲಹಾ ಸಮಿತಿ ಅಧ್ಯಕ್ಷರಾಧ ಪಿ.ಟಿ.ಪರಮೇಶ್ವರನಾಯ್ಕ, ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ, ಚಿನ್ನಿಕಟ್ಟಿ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಸಂಸ್ಥಾಪಕ ಸದಸ್ಯ ಡಾ.ಎಲ್ ಈಶ್ವರ್ ನಾಯ್ಕ ಭಾಗವಹಿಸಲಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment