ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೂಳೆಕೆರೆ ಗುಡ್ಡದ ಬಳಿಕ ಸಾರಥಿ ಗುಡ್ಡಕ್ಕೂ ಬೆಂಕಿ: ಸಣ್ಣ ಬೆಂಕಿ ಕಿಡಿ ಸೃಷ್ಟಿಸಿದ ಅನಾಹುತವೆಷ್ಟು…?

On: January 27, 2025 11:01 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:27-01-2025

ದಾವಣಗೆರೆ: ಚನ್ನಗಿರಿ ತಾಲೂಕಿನ ಸೂಳೆಕೆರೆ ಗುಡ್ಡಕ್ಕೆ ಬೆಂಕಿ ಬಿದ್ದಿತ್ತು. ಮೂರ್ನಾಲ್ಕು ದಿನಗಳ ಕಾಲ ಹೊತ್ತಿ ಉರಿದಿತ್ತು. ಆದ್ರೆ, ಇದೀಗ ಹರಿಹರ ತಾಲೂಕಿನ ಸಾರಥಿ ಗ್ರಾಮದಲ್ಲಿಯೂ ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಇದರಿಂದಾಗಿ ಬಣವೆ ಭಸ್ಮವಾಗಿದೆ. ಬೆಳೆಯೂ ಸುಟ್ಟುಕರಕಲಾಗಿದೆ. ರೈತರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹರಿಹರ ತಾಲೂಕಿನ ಸಾರಥಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 30 ಎಕರೆ ಪ್ರದೇಶದಲ್ಲಿನ ಬೆಳೆ ಹಾಗೂ 30ಕ್ಕೂ ಹೆಚ್ಚು ಅಧಿಕ ಹುಲ್ಲಿನ ಬಣವೆಗಳು ಸುಟ್ಟುಕರಕಲಾಗಿವೆ.

ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಗ್ರಾಮಸ್ಥರಿಗೆ ಗುಡ್ಡದ ಮೇಲ್ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ. ಆದ್ರೆ, ಬೆಂಕಿಯು ಬೆಳಿಗ್ಗೆಯೇ ಬಿದ್ದಿತ್ತು. ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದಾಗಿ
ಸಂಜೆ 4.30ರ ಸುಮಾರಿಗೆ ಬೆಂಕಿ ನಂದಿಸಲಾಯಿತು.

ಸುಮಾರು 10 ಎಕರೆಯಲ್ಲಿ ಬೆಳೆದಿದ್ದ ತೊಗರಿ, 4 ಎಕರೆಯಲ್ಲಿ ಬೆಳೆದಿದ್ದ ಅಲಸಂದೆ, 15 ಎಕರೆ ಜೋಳ, ಜಾನುವರುಗಳಿಗಾಗಿ ಸಂಗ್ರಹಿಸಿಟ್ಟಿದ್ದ 30ಕ್ಕೂ ಹೆಚ್ಚು ಹುಲ್ಲಿನ ಬಣವೆಗಳು ಭಸ್ಮವಾಗಿದ್ದು, ಘನತ್ಯಾಜ್ಯ ಘಟಕಕ್ಕೂ ಬೆಂಕಿ ತಾಗಿದ್ದು, ಹಸಿಕಸ
ಹಾಗೂ ಒಣಕಸ ಸಂಪೂರ್ಣ ಸುಟ್ಟು ಸುಮಾರು 50 ಸಾವಿರ ರೂಪಾಯಿಯಷ್ಟು ಹಾನಿ ಆಗಿದೆ. ನರೇಗಾ ಯೋಜನೆಯಡಿ ದೀಟೂರಿನಿಂದ ಸಾರಥಿ ಆಂಜನೇಯ ದೇವಸ್ಥಾನದವರೆಗೆ 900 ಅರಳಿ, ಗೋಣಿ, ಬಸರಿಗಿಡ ನೆಡಲಾಗಿತ್ತು. ಇವುಗಳಲ್ಲಿ ಹಲವು ಗಿಡಗಳು ಬೆಂಕಿಗೆ ಆಹುತಿಯಾಗಿವೆ.

ಗೋಮಾಳ ಜಮೀನುಗಳನ್ನು ಹೊಂದಿರುವ ಸುತ್ತಮುತ್ತಲಿನ ಗುಡ್ಡಗಳು ಒಣಗಿದ ಹುಲ್ಲು ಮತ್ತು ಕುರುಚಲು ಗಿಡಗಳಿಂದ ತುಂಬಿದ್ದು, ಸಣ್ಣ ಬೆಂಕಿಯ ಕಿಡಿ ಇಷ್ಟೊಂದು ಅನಾಹುತ ಸೃಷ್ಟಿಸಿದೆ. ರೈತರು ಹೊಲದ ಕಳೆ ತೆಗೆಯಲು ಬೆಂಕಿ ಹಚ್ಚಬಾರದು ಎಂದು ಅರಣ್ಯ ಇಲಾಖೆಯ ಅಧಿಕಾರಿ ಧನ್ಯಕುಮಾರ್ ಮನವಿ ಮಾಡಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment