SUDDIKSHANA KANNADA NEWS/ DAVANAGERE/ DATE:19-10-2023
ಬೆಂಗಳೂರು (Bangalore): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಯಾವುದೇ ವೈಮನಸ್ಸು, ಕಿರಿಕಿರಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
Read Also This Story:
ಗೋಧಿ (Wheat) ಬೆಳೆಗಾರರಿಗೆ ಬಂಪರ್ ಸುದ್ದಿ, ಪ್ರತಿ ಕ್ವಿಂಟಾಲ್ ಗೆ 150 ರೂ. ಹೆಚ್ಚಳ, ರೈತರಿಗೆ ಸಿಗಲಿದೆ 2275 ರೂ. ಬೆಂಬಲ ಬೆಲೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಲ್ಲರ ಜೊತೆಗೆ ಹೊಂದಿಕೊಂಡು ಕೆಲಸ ಮಾಡಬೇಕು. ನಾನು ಆರು ಬಾರಿ ಶಾಸಕನಾಗಿದ್ದೇನೆ, ಲಕ್ಷ್ಮೀ ಹೆಬ್ಬಾಳ್ಕರ್ ಎರಡನೇ ಬಾರಿ ಶಾಸಕರಾಗಿದ್ದಾರೆ. ಹಾಗಂತೆ ನಾನೇನೂ ವೀಕ್ ಅಲ್ಲ, ನನ್ನ ಸೈಲೆಂಟ್ ದೌರ್ಬಲ್ಯ ಅಲ್ಲ, ನನ್ನ 30 ವರ್ಷದ ರಾಜಕೀಯ ಸಕ್ಸಸ್ ಕೊಟ್ಟಿದೆ ಎಂದು ಹೇಳಿದರು.
ಶಾಸಕ ಲಕ್ಷ್ಮಣ್ ಸವದಿ ಕಾರ್ಯಾಧ್ಯಕ್ಷ ಸ್ಥಾನ ಕೇಳಿಲ್ಲ, ಒಂದು ವೇಳೆ ಕೇಳಿದ್ದರೂ ತಪ್ಪೇನಿದೆ. ಅವರ ಜೊತೆ ಯಾವುದೇ ವೈಮನಸ್ಸಿಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಲಕ್ಷ್ಮಣ್ ಸವದಿ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆಸಿದ್ದರು. ಲಕ್ಷ್ಮಣ್ ಸವದಿ ಅವರೂ ನನ್ನ ಜೊತೆ ಸಮಾಲೋಚನೆ ನಡೆಸಿದ್ದರು. ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ನನ್ನ ಮೌನ ದೌರ್ಬಲ್ಯವಲ್ಲ. ಹಾಗಂತ ನಾನೇನೂ ರೆಬಲ್ ಆಗುವುದೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಶಾಸಕರು, ಅಧಿಕಾರಿಗಳ ಜೊತೆ ಸಮನ್ವಯತೆ ಸಾಧಿಸಿ, ಉತ್ತಮ ಆಡಳಿತ ನೀಡಬೇಕು. ಜನರಿಗೆ ಒಳ್ಳೆಯದಾಗುವ ಕೆಲಸ ಮಾಡಬೇಕು. ನಾವೆಲ್ಲರೂ ಸೇರಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇವೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಣ್ಣ ಪುಟ್ಟ ಸಮಸ್ಯೆಗಳು ಕೂತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದು ಸತೀಶ್ ಜಾರಕಿಹೊಳಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೆಲವರು ಒಂದು ಬಾರಿ ಶಾಸಕರಾಗಿ ಸಚಿವರಾಗಿದ್ದಾರೆ. ನಾನು ಕೆಲವೊಮ್ಮೆ ಮಾತು ಕೇಳುತ್ತೇನೆ. ತಾಳ್ಮೆ ವಹಿಸುತ್ತೇನೆ. ತಾಳ್ಮೆಯಿಂದಲೇ ವರ್ತಿಸುತ್ತೇನೆ. ಲಕ್ಷ್ಮಣ್ ಸವದಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿದರೆ ಅಭ್ಯಂತರ ಏನಿಲ್ಲ. ಶಾಸಕರ ಜೊತೆ ಪ್ರವಾಸ ಹೋಗಲು ನನಗೇನೂ ಯಾರ ಅಡ್ಡಿ ಇಲ್ಲ ಎಂದು ತಿಳಿಸಿದರು.