ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೈಯದ್ ಖಾಲಿದ್ ಅಹ್ಮದ್ ರಿಗೆ ಪಾಲಿಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

On: November 28, 2024 2:45 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:28-11-2024

ದಾವಣಗೆರೆ: ಮಹಾನಗರ ಪಾಲಿಕೆ, ಕನ್ನಡಪರ ಸಂಘಟನೆಗಳು, ಪತ್ರಕರ್ತರ ಸಂಯುಕ್ತಾಶ್ರಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗಿದೆ.

ಕೊರೊನಾ ಸಂಕಷ್ಟದ ವೇಳೆಯಲ್ಲಿ ಸೈಯದ್ ಖಾಲಿದ್ ಅಹ್ಮದ್ ಅವರು ಕೊರೊನಾ ಸೋಂಕಿತರಿಗೆ ನೆರವು ನೀಡಿದ್ದರು. ಆಹಾರದ ವ್ಯವಸ್ಥೆ ಮಾಡಿದ್ದರು. ಕ್ವಾರಂಟೈನ್ ನಲ್ಲಿದ್ದವರಿಗೆ ಚಿಕಿತ್ಸೆಗೆ ನೆರವು ನೀಡಿದ್ದರು. ಮಾತ್ರವಲ್ಲ, ಲಸಿಕೆ ಕೊಡಿಸುವಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿರುವ ಸೈಯದ್ ಖಾಲಿದ್ ಅಹ್ಮದ್ ಅವರಿಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕೊರೊನಾ ವೇಳೆ ಮಾತ್ರವಲ್ಲ, ಶೈಕ್ಷಣಿಕವಾಗಿಯೂ ಸಾಕಷ್ಟು ವಿದ್ಯಾರ್ಥಿಗಳಿಗೆ ನೆರವು ನೀಡಿದ್ದಾರೆ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯ ಗುಣ ಮೈಗೂಡಿಸಿಕೊಂಡವರು. ಅದೇ ರೀತಿಯಲ್ಲಿ ಆರ್ಥಿಕವಾಗಿ ಹಿಂದುಳಿದ,
ಅಲ್ಪಸಂಖ್ಯಾತ ಸಮುದಾಯದವರೂ ಸೇರಿದಂತೆ ಎಲ್ಲಾ ಸಮುದಾಯವದರಿಗೆ ನೆರವು ನೀಡಿರುವ ಹೆಗ್ಗಳಿಕೆ ಅವರದ್ದಾಗಿದೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸನ್ಮಾನಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೈಯದ್ ಖಾಲಿದ್ ಅಹ್ಮದ್ ಅವರು ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ದೊರೆತಿರುವುದು ಖುಷಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment