Home ಉದ್ಯೋಗ ವಾರ್ತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7,150 ಹುದ್ದೆಗಳ ಭರ್ಜಿಗೆ ಅಧಿಸೂಚನೆ ಪ್ರಕಟ: ಯಾವುದೇ ಪದವಿ ಮುಗಿದಿದ್ದರೆ ಇಂದೇ ಅರ್ಜಿ ಸಲ್ಲಿಸಿ
ಉದ್ಯೋಗ ವಾರ್ತೆದಾವಣಗೆರೆನವದೆಹಲಿಬೆಂಗಳೂರು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7,150 ಹುದ್ದೆಗಳ ಭರ್ಜಿಗೆ ಅಧಿಸೂಚನೆ ಪ್ರಕಟ: ಯಾವುದೇ ಪದವಿ ಮುಗಿದಿದ್ದರೆ ಇಂದೇ ಅರ್ಜಿ ಸಲ್ಲಿಸಿ

Share
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
Share

ಬೆಂಗಳೂರು: ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶಾದ್ಯಂತ ಖಾಲಿ ಇರುವ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳ ಭರ್ಜಿಗೆ ಅಧಿಕೃತ ಅಧಿಸೂಚನೆ (CRPD/APPR/2026-27/07) ಹೊರಡಿಸಿದೆ. ಕರ್ನಾಟಕದಲ್ಲೂ 276 ಹುದ್ದೆಗಳಿದ್ದು, ಕನ್ನಡ ಭಾಷೆ ಬಲ್ಲ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19 ಮೇ 2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ಜೂನ್ 2026

ಲಿಖಿತ ಪರೀಕ್ಷೆ (ತಾತ್ಕಾಲಿಕ): ಜುಲೈ 2026

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Graduation) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 1 ಏಪ್ರಿಲ್ 2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ ಆಗಿರಬೇಕು. ನಿಯಮಾವಳಿಗಳ ಪ್ರಕಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ಸ್ಟೈಫಂಡ್ ಮತ್ತು ತರಬೇತಿ ಅವಧಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅವಧಿಗೆ ಆನ್-ದಿ-ಜಾಬ್ ತರಬೇತಿ ನೀಡಲಾಗುತ್ತದೆ. ಈ ಅವಧಿಯಲ್ಲಿ ಪ್ರತಿ ತಿಂಗಳು ₹15,000 ಸ್ಟೈಫಂಡ್ ನೀಡಲಾಗುವುದು. ಇದು ಖಾಯಂ ಬ್ಯಾಂಕ್ ಉದ್ಯೋಗವಲ್ಲ, ಕೇವಲ 1 ವರ್ಷದ ತರಬೇತಿಯಾಗಿದೆ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ (100 ಅಂಕಗಳು), ಸ್ಥಳೀಯ ಭಾಷಾ ಪರೀಕ್ಷೆ (ಕನ್ನಡ) ಮತ್ತು ವೈದ್ಯಕೀಯ ತಪಾಸಣೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ನೆಗೆಟಿವ್ ಮಾರ್ಕಿಂಗ್ (1/4th) ಇರಲಿದ್ದು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹300

ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಮೊದಲು NAPS ಪೋರ್ಟಲ್ (apprenticeshipindia.gov.in) ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ತದನಂತರ ಎಸ್‌ಬಿಐ ಅಧಿಕೃತ ವೆಬ್‌ಸೈಟ್ sbi.bank.in/careers ಗೆ ಭೇಟಿ ನೀಡಿ ಜೂನ್ 8ರ ಒಳಗಾಗಿ ಆನ್‌ಲೈನ್ ಫಾರ್ಮ್ ಭರ್ತಿ ಮಾಡಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿರುವ ಪಿಡಿಎಫ್ ಪ್ರತಿಯನ್ನು ಪರಿಶೀಲಿಸಬಹುದು.

Share

Leave a comment

Leave a Reply

Your email address will not be published. Required fields are marked *