ದಾವಣಗೆರೆ: ಕರ್ನಾಟಕ ಅಲೆಮಾರಿ ಅರೆಅಲೆಮಾರಿ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಮುಖ ಮಾಹಿತಿ ಹಾಗೂ ಸೂಚನೆಗಳು
ಅಂತಿಮ ದಿನಾಂಕ: ಸೆಪ್ಟೆಂಬರ್ 30.
ಅರ್ಜಿ ಸಲ್ಲಿಸುವ ವಿಧಾನ: ಸೇವಾ ಸಿಂಧು ಪೋರ್ಟಲ್ (sevasindhu.karnataka.gov.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಸೇವಾ ಕೇಂದ್ರಗಳು: ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಹತೆಯ ಪ್ರಮುಖ ಷರತ್ತು: ನಿಗಮದ ಯಾವುದೇ ಯೋಜನೆಯಲ್ಲಿ ಈಗಾಗಲೇ ಪ್ರಯೋಜನ ಪಡೆದಿದ್ದರೆ, ಅಂತಹ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಮರುಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ವಿವರ ಹಾಗೂ ಸಂಪರ್ಕಕ್ಕೆ
ಅಧಿಕೃತ ವೆಬ್‌ಸೈಟ್: kaad.karnataka.gov.in
ದಾವಣಗೆರೆ ಜಿಲ್ಲಾ ಕಚೇರಿ ಸಂಪರ್ಕ ಸಂಖ್ಯೆ: 08192-230934
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅಲೆಮಾರಿ ಅರೆಅಲೆಮಾರಿ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnatka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kaad.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.





Leave a comment