ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದ್ವಿತೀಯ ಪಿಯು: ಸೈನ್ಸ್ ಅಕಾಡೆಮಿ ಪದವಿಪೂರ್ವ ಕಾಲೇಜಿಗೆ ಶೇ.93.52 ರಷ್ಟು ಫಲಿತಾಂಶ

On: April 9, 2025 11:41 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-04-2025

ದಾವಣಗೆರೆ: 2024-25 ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ದಾವಣಗೆರೆಯ ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮವಾದ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಕು.ಸುಷ್ಮಿತಾ ಕೆ.ಎಂ. ಒಟ್ಟಾರೆ 600 ಅಂಕಗಳಿಗೆ 574 ಅಂಕಗಳನ್ನು ಗಳಿಸಿ, 95.7% ಫಲಿತಾಂಶ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕು. ಆದ್ಯ ಎನ್. ಎಂ (569/600) 94.8%, ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನವನ್ನೂ, ಕು. ಮಧುಮಿತಾ ಎಂ. (568/600) 94.7% ತೃತೀಯ ಸ್ಥಾನವನ್ನೂ ಕು.ಡಿ.ಇ. ಸಂಜನಾ (567/600) 94.5%, ಹಾಗೂ ಕು.ಎಸ್.ಎ ರಾಹುಲ್ (566/600) 94.3% ಫಲಿತಾಂಶ ಪಡೆದು ಕ್ರಮವಾಗಿ ಕಾಲೇಜಿಗೆ ನಾಲ್ಕು ಹಾಗೂ ಐದನೇ ಸ್ಥಾನಗಳನ್ನು ಪಡೆದುಕೊಂಡಿರುತ್ತಾರೆ.

ಒಟ್ಟು ಕನ್ನಡ ಭಾಷಾ ವಿಷಯದಲ್ಲಿ 3 ವಿದ್ಯಾರ್ಥಿಗಳು, ಗಣಿತದಲ್ಲಿ 2 ವಿದ್ಯಾರ್ಥಿಗಳು, ಜೀವಶಾಸ್ತ್ರದಲ್ಲಿ ಒಬ್ಬ ವಿದ್ಯಾರ್ಥಿ 100/100 ಅಂಕಗಳನ್ನು ಗಳಿಸಿರುತ್ತಾರೆ. ಒಟ್ಟಾರೆ 47 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ವಿದ್ಯಾರ್ಥಿಗಳು 149 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಒಟ್ಟಾರೆ ಕಾಲೇಜಿಗೆ 93.52 % ಫಲಿತಾಂಶ ಬಂದಿದ್ದು, ಈ ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment