ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

6ರಿಂದ 9ನೇ ತರಗತಿ ಓದುತ್ತಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ಸ್ಕಾಲರ್ ಶಿಪ್ ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ

On: August 17, 2024 1:49 PM
Follow Us:
---Advertisement---

(State Scholarships) 6 ನೇ ತರಗತಿಯಿಂದ 9 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ದೀನ್ ದಯಾಳ್ ಸ್ಪರ್ಶ್ ಯೋಜನೆ ಅಡಿಯಲ್ಲಿ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಸ್ಪರ್ಶ ಎಂದರೆ, ಹವ್ಯಾಸವಾಗಿ ಸ್ಟ್ಯಾಂಪ್‍ಗಳಲ್ಲಿ ಆಪ್ಟಿಟ್ಯೂಡ್ ಮತ್ತು ಸಂಶೋಧನೆಯ ಪ್ರಚಾರಕ್ಕಾಗಿ ಸ್ಕಾಲರ್‌ ಶಿಪ್ ಎಂದರ್ಥ. ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸುವುದು ಈ ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ.

ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, 2023-24 ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ/ ಫಿಲಾಟೆಲಿಕ್ ಕ್ಲಬ್‍ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6 ನೇ ತರಗತಿಯಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 6 ಸಾವಿರಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಿದೆ.

ಹಂತ-1 ಅಂಚೆಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು/ಪೋಸ್ಟ್ ಮಾಡಲು ಆಗಸ್ಟ್, 31 ಕೊನೆಯ ದಿನವಾಗಿದೆ.

ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನದ ಈ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿಗೆ ಬಿ.ಎಸ್.ಸುದರ್ಶನ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಕೊಡಗು ಅಂಚೆ ವಿಭಾಗ ದೂ.ಸಂ. 9448291044 ನ್ನು ಸಂಪರ್ಕಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment