Site icon Kannada News-suddikshana

9ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 12,000 ಸ್ಕಾಲರ್ ಶಿಪ್ ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

(NSP Scholarship) 9 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಎನ್.ಎಸ್.ಪಿ ನ್ಯಾಷನಲ್ ಮೀನ್ಸ್ ಕಂ ಮೆರಿಟ್ ವತಿಯಿಂದ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಕೆ ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಎನ್.ಎಸ್.ಪಿ ನ್ಯಾಷನಲ್ ಮೀನ್ಸ್ ಕಂ ಮೆರಿಟ್ ಸ್ಕಾಲರ್ಶಿಪ್, ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 9ನೇ ತರಗತಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೀಡುವ ಸ್ಕಾಲರ್ ಶಿಪ್ ಇದಾಗಿದೆ. 8ನೇ ತರಗತಿಯ ನಂತರ ಶಿಕ್ಷಣ ಮೊಟಕುಗೊಳಿಸುವುದನ್ನು ನಿಲ್ಲಿಸಲು ಮತ್ತು ಮಾಧ್ಯಮಿಕ ಶಿಕ್ಷಣವನ್ನು ಉತ್ತೇಜಿಸಲು ಹಿಂದುಳಿದ ವರ್ಗದ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುತ್ತಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ಇಲ್ಲಿದೆ ನೋಡಿ.

(NSP Scholarship) ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 9ನೇ ತರಗತಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಲಭ್ಯವಿದೆ.
* ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ಕನಿಷ್ಠ 60% ಅಥವಾ ತತ್ಸಮಾನ ಶ್ರೇಣಿಗಳನ್ನು ಪಡೆದಿರಬೇಕು.

(ಗಮನಿಸಿ: ಎಸ್.ಸಿ./ಎಸ್.ಟಿ. ವಿದ್ಯಾರ್ಥಿಗಳು ಅಂಕಗಳ ಅಗತ್ಯತೆಯಲ್ಲಿ 5% ಸಡಿಲಿಕೆ ಪಡೆಯಲು ಅರ್ಹರಾಗಿರುತ್ತಾರೆ)

ಎಷ್ಟು ಸ್ಕಾಲರ್ ಶಿಪ್ ಲಭ್ಯ:
12,000

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/NMSS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಎಷ್ಟು ಸ್ಕಾಲರ್ ಶಿಪ್ ಲಭ್ಯ:
12,000

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/NMSS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Exit mobile version