SUDDIKSHANA KANNADA NEWS/ DAVANAGERE/ DATE:15-08-2023
ದಾವಣಗೆರೆ: ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಚೇರಿ ಮುಂದೆ 77ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಉಪಾಧ್ಯಕ್ಷ ರಜ್ವಿ ರಿಯಾಝ್ ಅಹಮ್ಮದ್ ರವರು ಧ್ವಜಾರೋಹಣ ಮಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸುದ್ದಿಯನ್ನೂ ಓದಿ:
Davanagere: ಎಸ್ಪಿ ಡಾ. ಕೆ. ಅರುಣ್ ವರ್ಗಾವಣೆಗೆ ಕಾಂಗ್ರೆಸ್ ಶಾಸಕರು ಒತ್ತಡ ಹೇರಿಲ್ಲ: ಎಸ್. ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ
1947 ಆಗಸ್ಟ್ 15 ರಂದು ಭಾರತವು ಬ್ರಿಟಿಷರ 200 ವರ್ಷಗಳ ಗುಲಾಮಗಿರಿಯಿಂದ ಎಲ್ಲಾ ಜಾತಿ ಮತಗಳ ತ್ಯಾಗ ಬಲಿದಾನ ಮತ್ತು ಹೋರಾಟದಿಂದ ದೇಶವು ಸ್ವತಂತ್ರವಾಯಿತು. ಇವತ್ತು ನಾವು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದೇವೆ. ಆದರೆ ಇವತ್ತು ದೇಶವು ಫ್ಯಾಸಿಸ್ಟ್ ಶಕ್ತಿಗಳ ಕೈಗೆ ಸಿಲುಕಿ ಅಂತದ್ದೇ ಪರಿಸ್ಥಿತಿ ಮತ್ತೊಮ್ಮೆ ನಿರ್ಮಾಣವಾಗಿದೆ. ದೇಶದಲ್ಲಿ ದೇಶವಾಸಿಗಳಿಗೆ ವಾಕ್ ಸ್ವಾತಂತ್ರ್ಯ , ಆಹಾರದ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ ಅದೇ ರೀತಿ ಸಾಮಾಜಿಕ ಮತ್ತು ಆರ್ಥಿಕವಾಗಿ ದೇಶವು ದಿವಾಳಿಯಾಗಿದೆ. ಈ ಎಲ್ಲಾ ಪರಿಸ್ಥಿತಿಗಳಿಂದ ದೇಶವಾಸಿಗಳು ಭಯ ಮತ್ತು ಹಸಿವಿನಿಂದ ನಲುಗಿ ಹೋಗಿದ್ದಾರೆ ಎಂದರು.
ದೇಶದಲ್ಲಿ ಇಂಥ ಪರಿಸ್ಥಿತಿ ನಿರ್ಮಾಣ ಮಾಡಿರುವ ಫ್ಯಾಸಿಸ್ಟ್ ಮನಸ್ಥಿತಿಯ ಬಿಜೆಪಿ ಮತ್ತು ಸಂಘ ಪರಿವಾರಗಳ ಸಂಕೋಲೆಯಿಂದ ದೇಶವನ್ನು ಬಿಡಿಸಲು ಎಲ್ಲಾ ಜಾತಿ ಮತ್ತು ಮತಗಳು ಒಗ್ಗೂಡಿ ಹೋರಾಟ ನಡೆಸಬೇಕೆಂದು
ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಇಸ್ಮಾಯಿಲ್ ಜಬಿವುಲ್ಲಾ ಮತ್ತು ಜಿಲ್ಲಾ ಸಮಿತಿ ಸದಸ್ಯರು, ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.