SUDDIKSHANA KANNADA NEWS/ DAVANAGERE/ DATE:05-03-2025
ದಾವಣಗೆರೆ: ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಮಾರ್ಚ್ 5 ರಂದು ನಡೆದ ರಾಜ್ಯಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ವಿಷಯಗಳ ಪರೀಕ್ಷೆಗೆ 396 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ.
ರಾಜ್ಯಶಾಸ್ತ್ರ ವಿಷಯದ ಪರೀಕ್ಷೆಗೆ 4397 ವಿದ್ಯಾರ್ಥಿಗಳು ನೊಂದಾಯಿಸಿದ್ದು 4030 ಪರೀಕ್ಷೆಗೆ ಹಾಜರಾಗಿ 367 ವಿದ್ಯಾರ್ಥಿಗಳು ಗೈರಾಗಿದ್ದರು. ಸಂಖ್ಯಾಶಾಸ್ತ್ರ ವಿಷಯವನ್ನು 1263 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು 1234 ಹಾಜರಾಗಿ 29 ವಿದ್ಯಾರ್ಥಿಗಳು ಗೈರು ಹಾಜರಾಗಿರುವರು.