Site icon Kannada News-suddikshana

CPM ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ವಿಧಿವಶ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ (72) ಇಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಕೃತಕ ಉಸಿರಾಟದ ಬೆಂಬಲದಲ್ಲಿದ್ದರು. ವೈದ್ಯರ ಬಹುಶಿಸ್ತೀಯ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ.

Exit mobile version