Site icon Kannada News-suddikshana

ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅರೋಗ್ಯ ಸ್ಥಿತಿ ಗಂಭೀರ!

ನವದೆಹಲಿ: ಮಾರ್ಕ್ಸ್‌ ವಾದಿ ಕಮ್ಯುನಿಸ್ಟ್ ಪಕ್ಷದ (ಸಿಪಿಐ(ಎಂ)) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ದೆಹಲಿಯ ಏಮ್ಸ್‌ ದಾಖಲಿಸಲಾಗಿತ್ತು. ಇಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಅವರನ್ನು ಈಗ ಐಸಿಯುಗೆ ದಾಖಲಿಸಲಾಗಿದೆ. ಸದ್ಯ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಪಕ್ಷದ ಮುಖಂಡರು ಮಾಹಿತಿ ನೀಡಿದ್ದಾರೆ.

ಮೂಲಗಳ ಪ್ರಕಾರ, ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ಸೀತಾರಾಮ್ ಯೆಚೂರಿ ಅವರನ್ನು ಆಗಸ್ಟ್ 19 ರಂದು ದೆಹಲಿಯ ಏಮ್ಸ್‌ ದಾಖಲಿಸಲಾಗಿತ್ತು. ಅರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು ವೆಂಟಿಲೇಟರ್ನಲ್ಲಿ ಇರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Exit mobile version