SUDDIKSHANA KANNADA NEWS/ DAVANAGERE/ DATE:13-02-2025
ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ ಅಂತಿಮ ವರ್ಷದ ಒಟ್ಟು 44 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.
ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್
ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.