ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಯುವನಿಧಿ ಫಲಾನುಭವಿಗಳ ಸ್ವಯಂ ಘೋಷಣೆ ಪತ್ರ ಕಡ್ಡಾಯ

On: February 27, 2024 6:30 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:28-02-2024

ಶಿವಮೊಗ್ಗ: ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯನ್ನು 2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಪದವಿ ಸ್ನಾತಕೊತ್ತರ ಪದವಿ ಮತ್ತು ದಿಪ್ಲೋಮೊಗಳ ಅಭ್ಯರ್ಥಿಗಳಿಗೆ ಈಗಾಗಲೇ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಣಿಯಾಗಿದ್ದು, ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೊರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಿಂದ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.

ಈ ಯೋಜನೆ ಪ್ರತಿ ತಿಂಗಳು ಪಡೆಯಬೇಕಿದ್ದರೆ ಪ್ರತಿ ಮಾಹೆಯಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಪೆಬ್ರವರಿ 29 ರವರೆಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಸ್ವಯಂ ಘೋಷಣ ಪಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರಾ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದು. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದೆ. ಮುಂದಿನ ತಿಂಗಳು ಈ ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿದ್ದು, ಎಸ್.ಎಂ.ಎಸ್ ಮೂಲಕ ಅಭ್ಯರ್ಥಿಗಳಿಗೆ ಸಂದೇಶ ರವಾನಿಸಲಾಗುತ್ತದೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೋದಿರಬೇಕು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು http;//sevasindhugs.karnataka.gov.in ವೆಬ್ ಸೆಟ್ ಮೂಲಕ ವೀಕ್ಷಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment