ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ಗಲಾಟೆ: ಏಳು ಮಂದಿ ಆರೋಪಿಗಳ ಬಂಧನ

On: September 26, 2025 6:44 PM
Follow Us:
---Advertisement---

SUDDIKSHANA KANNADA NEWS/DAVANAGERE/DATE:26_09_2025

ದಾವಣಗೆರೆ: ನಗರದ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಪ್ಲೆಕ್ಸ್ ಕಟ್ಟುವ ವಿಚಾರದಲ್ಲಿ ನಡೆದ ಗಲಾಟೆ ಸಂಬಂಧ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ಹೀಯಾಳಿಸುವುದು, ಬೈಯ್ಯುವುದು ಬಿಡಲಿ, ನಮಗೂ ಬೈಯ್ಯಲು ಬರುತ್ತೆ: ಎಸ್. ಎಸ್. ಮಲ್ಲಿಕಾರ್ಜುನ್ ವಿರುದ್ಧ ಸಿಡಿದೆದ್ದ ಜಿ. ಎಂ. ಸಿದ್ದೇಶ್ವರ!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ 4 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಕಾರ್ಯಾಚರಣೆ ನಡೆಸಿ ಈಗಾಗಲೇ 7 ಆರೋಪಿತರನ್ನು ಬಂಧಿಸಿದೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ಅವರು ತಿಳಿಸಿದ್ದಾರೆ.

ಎರಡು ಕಡೆಯ ಮುಖಂಡರಿಗೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ. ನಗರದ ಎರೆಡು ಕೋಮಿನ ಮುಖಂಡರು, ನಾಗರಿಕರು ಜಿಲ್ಲಾ ಪೊಲೀಸ್ ಜೊತೆಯಲ್ಲಿ ಸಹಕರಿಸಬೇಕು. ಯಾವುದೇ ಕೋಮಿನ ಮುಖಂಡರು, ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ, ಪೋಸ್ಟರ್ ಗಳನ್ನು ಹಾಕಬಾರದು. ಒಂದು ವೇಳೆ ಹಾಗೇನಾದರೂ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಉಮಾ ಪ್ರಶಾಂತ್ ಅವರು ಎಚ್ಚರಿಕೆ ನೀಡಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment