SUDDIKSHANA KANNADA NEWS/ DAVANAGERE/ DATE:05-03-2025
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ.
ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ, ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.
ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ದೇವಸ್ಥಾನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.