SUDDIKSHANA KANNADA NEWS/ DAVANAGERE/ DATE:01-11-2024
ದಾವಣಗೆರೆ: ಮಹಿಳೆಯರಿಗೆ ಉಚಿತ ಬಸ್ ಸಂಚಾರ ಮಾಡುವ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಶಕ್ತಿ ಯೋಜನೆ ನಿಲ್ಲಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ನಿಲ್ಲಿಸುವುದಾಗಿ ಸಿಎಂ ಸಿದ್ದರಾಮಯ್ಯರಾಗಲೀ, ಡಿಸಿಎಂ ಡಿ. ಕೆ. ಶಿವಕುಮಾರ್ ಅವರಾಗಲೀ ಹೇಳಿಲ್ಲ. ವಿನಾಕಾರಣ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಶಕ್ತಿ ಯೋಜನೆ ನಿಲ್ಲಿಸುವುದಿಲ್ಲ. ಈ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯರೇ ಸ್ಪಷ್ಟನೆ ನೀಡಿದ್ದಾರೆ. ಈಗ ತುಂಬಾ ಒಳ್ಳೆಯ ತಂತ್ರಜ್ಞಾನ ಬಂದಿದೆ. ಯಾವುದೇ ಕಾರಣಕ್ಕೂ ಯೋಜನೆ ನಿಲ್ಲುವುದಿಲ್ಲ ಎಂದು ತಿಳಿಸಿದರು.