Home ದಾವಣಗೆರೆ ಶಾಮನೂರು ಶಿವಶಂಕರಪ್ಪರು ಆರಾಮಾಗಿದ್ದಾರೆ, ಆರೋಗ್ಯದ ಬಗ್ಗೆ ಆತಂಕ ಬೇಡ: ಎಸ್. ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ
ದಾವಣಗೆರೆಬೆಂಗಳೂರು

ಶಾಮನೂರು ಶಿವಶಂಕರಪ್ಪರು ಆರಾಮಾಗಿದ್ದಾರೆ, ಆರೋಗ್ಯದ ಬಗ್ಗೆ ಆತಂಕ ಬೇಡ: ಎಸ್. ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ

Share
ಎಸ್. ಎಸ್. ಮಲ್ಲಿಕಾರ್ಜುನ್
Share

SUDDIKSHANA KANNADA NEWS/DAVANAGERE/DATE:24_11_2025

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷರೂ ಆದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪರು ಆರಾಮಿದ್ದಾರೆ. ಚಿಕಿತ್ಸೆಗೆ ಪ್ರತಿಕ್ರಿಯಿಸುತ್ತಿದ್ದು, ಆದಷ್ಟು ಬೇಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರ ಪುತ್ರರೂ ಆದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು.

READ ASLO THIS STORY: ಸಿಎಂ ಆಗಿ ಮುಂದುವರಿ ಎಂದ್ರೆ ಮುಂದುವರೀತಿನಿ.. ಹೈಕಮಾಂಡ್ ನಿರ್ಧಾರಕ್ಕೆ ಡಿಕೆ ಶಿವಕುಮಾರ್ ಒಪ್ಲೇಬೇಕು: ಸಿದ್ದರಾಮಯ್ಯ ಹೊಸ ವರಸೆ!

ಎಸ್. ಎಸ್. ಮಲ್ಲಿಕಾರ್ಜುನ್

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಆತಂಕ ಬೇಡ, ಭಯಭೀತರಾಗುವಂತೇನೂ ಇಲ್ಲ. ಚೆನ್ನಾಗಿದ್ದಾರೆ. ಈ ವಾರ ಅಥವಾ ಮುಂದಿನ ವಾರದಲ್ಲಿ ದಾವಣಗೆರೆಗೆ ಬರುತ್ತಾರೆ ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ. ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಪೂಜೆ ಪುನಸ್ಕಾರ ಮಾಡಿದ್ದಾರೆ. ದೇವರು ಮತ್ತು ಜನರ ಆಶೀರ್ವಾದದಿಂದ ಸಂಪೂರ್ಣವಾಗಿ ಆರೋಗ್ಯವಂತರಾಗಿ ಮನೆಗೆ ವಾಪಸ್ ಆಗಲಿದ್ದಾರೆ ಎಂದು ಮಲ್ಲಿಕಾರ್ಜುನ್ ಅವರು ಹೇಳಿದರು.

Share

Leave a comment

Leave a Reply

Your email address will not be published. Required fields are marked *