ದಾವಣಗೆರೆ: ಅಖಿಲ ಭಾರತ ವೀರಶೈವ ಮಹಸಭಾ ರಾಷ್ಟ್ರೀಯ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರೂ ದಾವಣಗೆರೆಯನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ ಶಾಮನೂರು ಶಿವಶಂಕರಪ್ಪರ ಅಗಲಿಕೆ ತುಂಬರಲಾರದ ನಷ್ಟ ಎಂದು ಕೇಂದ್ರದ ಮಾಜಿ ಸಚಿವ ಡಾ. ಜಿ. ಎಂ. ಸಿದ್ದೇಶ್ವರ, ಗಾಯತ್ರಿ ಸಿದ್ದೇಶ್ವರ ಅವರು ಸಂತಾಪ ಸೂಚಿಸಿದ್ದಾರೆ.
READ ALSO THIS STORY: ಬಾರದೂರಿಗೆ ಹೋದ ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ
ಶ್ರೀಯುತರ ಅಗಲಿಕೆ ದಾವಣಗೆರೆಗೆ ಅಷ್ಟೇ ಅಲ್ಲದೆ ಇಡೀ ರಾಜ್ಯಕ್ಕೆ ನಷ್ಟವಾಗಿದೆ. ರಾಜಕಾರಣವನ್ನು ಅಧಿಕಾರ ಎಂದು ಭಾವಿಸದೇ ಅದನ್ನು ಸೇವೆ ಎಂದು ಭಾವಿಸಿ ಜೀವಮಾನದುದ್ದಕ್ಕೂ ದಾನ ಧರ್ಮಗಳನ್ನು ಮಾಡುತ್ತಾ ಇತರರಿಗೆ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ, ಮುತ್ಸದ್ದಿ ರಾಜಕಾರಣಿಗಳು ಹೇಗಿರಬೇಕು ಎಂಬುದಕ್ಕೆ ಪ್ರಾಯಶ: ಉದಾಹರಣೆಯಾಗಿದ್ದರು ಎಂದರೆ ಅತಿಶಯೋಕ್ತಿ ಆಗಲಾರದು ಎಂದು ಹೇಳಿದ್ದಾರೆ.
READ ALSO THIS STORY: ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪರು ರಾಜ್ಯ ರಾಜಕಾರಣದಲ್ಲಿ ಸೋಲಿಲ್ಲದ ಸರದಾರರಾಗಿದ್ದು ಹೇಗೆ? ಇಂಟ್ರೆಸ್ಟಿಂಗ್ ಸ್ಟೋರಿ
ಕಾಲೇಜುಗಳು, ಸಕ್ಕರೆ ಕಾರ್ಖಾನೆಗಳು, ಆಸ್ಪತ್ರೆಗಳು ಈಗೆ ಹಲವು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಉಪಯುಕ್ತ ಕೆಲಸಗಳನ್ನು ಮಾಡಿದ್ದಾರೆ, ಶ್ರೀಯುತರ ಅಗಲಿಕೆಯಿಂದ ಸಮಾಜಕ್ಕೆ, ಹಾಗೂ ಕುಟುಂಬ ವರ್ಗದವರಿಗೆ ಆಗಿರುವ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಿ. ಎಂ. ಸಿದ್ದೇಶ್ವರ ಮತ್ತು ಬಿಜೆಪಿ ನಾಯಕಿ ಗಾಯಿತ್ರಿ ಸಿದ್ದೇಶ್ವರ ಅವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
- Shamanuru Shivashankarappa
- Shamanuru Shivashankarappa Death
- Shamanuru Shivashankarappa Death news
- Shamanuru Shivashankarappa Mla
- Shamanuru Shivashankarappa News
- Shamanuru Shivashankarappa News Updates
- ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ
- ಶಾಮನೂರು ಶಿವಶಂಕರಪ್ಪ
- ಶಾಮನೂರು ಶಿವಶಂಕರಪ್ಪ ಅಖಿಲ ಭಾರತ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ
- ಶಾಮನೂರು ಶಿವಶಂಕರಪ್ಪ ಅಜರಾಮರ
- ಶಾಮನೂರು ಶಿವಶಂಕರಪ್ಪ ಇನ್ನಿಲ್ಲ
- ಶಾಮನೂರು ಶಿವಶಂಕರಪ್ಪ ನೆನಪು ಮಾತ್ರ
- ಶಾಮನೂರು ಶಿವಶಂಕರಪ್ಪ ನ್ಯೂಸ್
- ಶಾಮನೂರು ಶಿವಶಂಕರಪ್ಪ ವಿಧಿವಶ





Leave a comment