SUDDIKSHANA KANNADA NEWS/DAVANAGERE/DATE:14_12_2025
ಬೆಂಗಳೂರು: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ ಎಂದು ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.





Leave a comment