Home ದಾವಣಗೆರೆ ಶಾಮನೂರು ಶಿವಶಂಕರಪ್ಪರ ಕುಟುಂಬಕ್ಕೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು: ಜಿ. ಬಿ. ವಿನಯ್ ಕುಮಾರ್
ದಾವಣಗೆರೆನವದೆಹಲಿಬೆಂಗಳೂರು

ಶಾಮನೂರು ಶಿವಶಂಕರಪ್ಪರ ಕುಟುಂಬಕ್ಕೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು: ಜಿ. ಬಿ. ವಿನಯ್ ಕುಮಾರ್

Share
ಶಾಮನೂರು ಶಿವಶಂಕರಪ್ಪ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅನಿರೀಕ್ಷಿತವಾಗಿ ಬಂದಿದೆ. ಶಾಮನೂರು ಶಿವಶಂಕರಪ್ಪರ ನಿಧನದಿಂದ ತೆರವಾಗಿರುವ ಈ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣ ಕೊನೆಗಾಣಬೇಕೆಂಬುದು ನನ್ನ ಆಶಯ. ಹಾಗಾಗಿ ಯಾವುದೇ ಕಾರಣಕ್ಕೂ ಈ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣದ ಪರಂಪರೆ ಹೊಂದಿರುವ ಶಾಮನೂರು ಶಿವಶಂಕರಪ್ಪರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ಆತ್ಮಹತ್ಯೆಗೆ ಮುನ್ನ ಅಮಲು ಪದಾರ್ಥ ಸೇವಿಸಿದ್ದರಾ ಚಂದ್ರಶೇಖರ್ ಸಂಕೊಳ್: ಡಿಎನ್ಎ ಟೆಸ್ಟ್ ಗೆ ಮುಂದಾಗಿರುವುದ್ಯಾಕೆ ಪೊಲೀಸರು?

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಿಂದಲೂ ಕುಟುಂಬ ರಾಜಕಾರಣದ ವಿರುದ್ದ ಹೋರಾಡುತ್ತಿದ್ದೇನೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಲ್ಲಿದ್ದರೂ ಕುಟುಂಬ ರಾಜಕಾರಣ ಅಂತ್ಯವಾಗಬೇಕು ಎಂಬ ನಿಲುವಿನಲ್ಲಿ ಬದಲಾವಣೆ ಇಲ್ಲ. ದೇಶದಲ್ಲೇ ಯಾವ ಪಕ್ಷದಲ್ಲಿದ್ದರೂ ಫ್ಯಾಮಿಲಿ ಪೊಲಿಟಿಕ್ಸ್ ತೊಲಗಬೇಕು ಎಂದು ಹೇಳಿದರು.

ದಾವಣಗೆರೆಯಲ್ಲಿ ನಿರೀಕ್ಷೆಯಂತೆ ಅಭಿವೃದ್ಧಿ ಆಗಿಲ್ಲ. ಸರ್ಕಾರಿ ಮೆಡಿಕಲ್ ಕಾಲೇಜು ಇದುವರೆಗೆ ಬಂದೇ ಇಲ್ಲ. ಈಗಲೂ ಮಂಗಳೂರು ಮತ್ತು ಮಣಿಪಾಲದ ಆಸ್ಪತ್ರೆಗಳಿಗೆ ಸುಮಾರು 50 ರಿಂದ 60 ಬಸ್ ಗಳಲ್ಲಿ ರೋಗಿಗಳು ನಿತ್ಯವೂ ಹೋಗುತ್ತಿದ್ದಾರೆ. ಹಾವೇರಿಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಒಪ್ಪಿಗೆ ಸಿಕ್ಕಿದೆ. ಆದರೆ ದಾವಣಗೆರೆಯಲ್ಲಿ ಆಗಿಲ್ಲ. ಮುಖ್ಯಮಂತ್ರಿ, ಸಚಿವರು ಮಿನಿ ರಿಪಬ್ಲಿಕ್ ನಂತೆ ವರ್ತಿಸುವವರ ಎದುರು ಹಾಕಿಕೊಳ್ಳಲು ಮನಸ್ಸು ಮಾಡದಿರುವುದರಿಂದ ಮೆಡಿಕಲ್ ಕಾಲೇಜು ಬಂದಿಲ್ಲ ಎಂದು ಹೇಳಿದರು.

ದರ್ಪ, ಅಹಂಕಾರ, ಕ್ಷೇತ್ರದ ಮೇಲಿನ ಹಿಡಿತ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದರೆ ಮುಂದುವರಿಯುತ್ತದೆ. ಅಧಿಕಾರ ಬೇಕಿರುವುದು ಉದ್ಯಮ, ವ್ಯವಹಾರ ಉಳಿಸಿಕೊಳ್ಳಲು, ಬೆಳೆಸಿಕೊಳ್ಳಲು. ಅತ್ಯುನ್ನತ ಕ್ರೀಡಾಂಗಣ, ಸಾರ್ವಜನಿಕ ಆಡಿಟೋರಿಯಂ, ಎಲ್ಲಾ ವ್ಯವಸ್ಥೆಗಳುಳ್ಳ ರಂಗಮಂದಿರ ಸೇರಿದಂತೆ ದೊಡ್ಡ ಕಾರ್ಯಕ್ರಮ ನಡೆಸಲು ಸೂಕ್ತ ವ್ಯವಸ್ಥೆ ಇಲ್ಲ ಎಂದು ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಹರಿದಾಡುತ್ತಲೇ ಇವೆ. ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದರೆ ಶಾಮನೂರು ಶಿವಶಂಕರಪ್ಪರ ಪುತ್ರ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳೂ ಹರಿದಾಡುತ್ತಿವೆ.
ಆಗ ಬಿಜೆಪಿಯಲ್ಲಿಯೂ ಕುಟುಂಬ ರಾಜಕಾರಣಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಯಾವುದೇ ಕಾರಣಕ್ಕೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕುಟುಂಬ ರಾಜಕಾರಣ ಮುಂದುವರಿಯಬಾರದು ಎಂದು ಜಿ ಬಿ. ವಿನಯ್ ಕುಮಾರ್ ಅಭಿಪ್ರಾಯಪಟ್ಟರು.

 

Share

Leave a comment

Leave a Reply

Your email address will not be published. Required fields are marked *