ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Shamanuru Shivashankarappa: 93 ನೇ ಜನುಮದಿನದ ಸಂಭ್ರಮದಲ್ಲಿ ಶಾಮನೂರು ಶಿವಶಂಕರಪ್ಪ: ಕಾಂಗ್ರೆಸ್, ಅಭಿಮಾನಿಗಳಿಂದ ಯಾವೆಲ್ಲಾ ಕಾರ್ಯಕ್ರಮಗಳ ಆಯೋಜನೆ..? 

On: June 12, 2023 10:25 AM
Follow Us:
Shamanuru Shivashankarappa
---Advertisement---

SUDDIKSHANA KANNADA NEWS/ DAVANAGERE/ DATE:12-06-2023

ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ 93 ನೇ ಜನುಮದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲಾ ಕಾಂಗ್ರೆಸ್ ಪಕ್ಷವು ಹಮ್ಮಿಕೊಂಡಿದೆ.

ಜೂನ್ 16ರಂದು 92 ವರ್ಷ ಪೂರೈಸಿ 93ನೇ ವರ್ಷಕ್ಕೆ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರು ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಎಸ್. ಎಸ್. ಅಭಿಮಾನಿಗಳು ಹಾಗೂ ಪಕ್ಷದ ವತಿಯಿಂದ ವಿವಿಧ ಸಮಾಜಸೇವಾ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸುದ್ದಿಯನ್ನೂ ಓದಿ:

Davanagere:ರುದ್ರವ್ವನ ಸಾವಿಲ್ಲದ ಬದುಕು! ಕುತೂಹಲಕಾರಿ ಸ್ಟೋರಿ ನೀವು ಓದ್ಲೇಬೇಕು

 

ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಉದ್ದೇಶದಿಂದ ಹಲವು ಜನಪರ ಕಾರ್ಯಕ್ರಮಗಳು ನಡೆಯಲಿವೆ. ಅನಾಥಾಶ್ರಮದ ಮಕ್ಕಳಿಗೆ, ವೃದ್ಧಾಶ್ರಮ ವಾಸಿಗಳಿಗೆ ಹಾಗೂ ವಿಕಲಚೇತನ ಮಕ್ಕಳಿಗೆ ವಿವಿಧ ಅಗತ್ಯ ಪರಿಕರಿಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಗೋ ಶಾಲೆಗಳಲ್ಲಿ ಗೋವುಗಳಿಗೆ ಮೇವು ವಿತರಣೆ, ನಿರಾಶ್ರಿತ ಕೇಂದ್ರಗಳಲ್ಲಿ ಅನ್ನಸಂತರ್ಪಣೆ, ರಕ್ತದಾನ ಶಿಬಿರ, ಸಸಿ ನೆಡುವ ಕಾರ್ಯಕ್ರಮಗಳೂ ಸೇರಿದಂತೆ ಬೇರೆ ಬೇರೆ ರೀತಿಯ ಸಮಾರಂಭವೂ ಜರುಗಲಿದೆ. ಜೊತೆಗೆ ಎಸ್. ಎಸ್. ಅಭಿಮಾನಿಗಳು ಅವರ ವಾರ್ಡ್ ಗಳಲ್ಲಿ ಜನುಮದಿನದ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದರು.

press meet

ಮಹಾನಗರ ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ, ಹಾಲಿ ಸದಸ್ಯ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಜನುಮದಿನದ ಅಂಗವಾಗಿ ಒಂದು ಸಾವಿರ ಗಿಡಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ. ಜನುಮದಿನದಂದು ಆರಂಭವಾಗುವ ಈ ಕಾರ್ಯ ಒಂದು ವಾರಗಳ ಕಾಲ ನಡೆಯಲಿದೆ. ಎಂಸಿಸಿ ಎ ಬ್ಲಾಕ್ ನಲ್ಲಿ ಸಸಿ ನೆಡುವ ಕಾರ್ಯಕ್ಕೆ ಜೂನ್ 16ರಂದು ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ನ ದಕ್ಷಿಣ ಬ್ಲಾಕ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮಾತನಾಡಿ, ಶಾಮನೂರು ಶಿವಶಂಕರಪ್ಪ (Shamanuru Shivashankarappa)ರು  93 ನೇ ವರ್ಷಕ್ಕೆ ಕಾಲಿಡುತ್ತಿರುವುದರಿಂದ ಸಮಾಜ ಸೇವೆ ಮಾಡಿದ ಹಿರಿಯರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸೇರಿದಂತೆ

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 93 ಮಂದಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪ (Shamanuru Shivashankarappa)ರ 93 ವರ್ಷದ ಪ್ರಯುಕ್ತ ರೂಪಿಸಲಾದ ಲೋಗೋವನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಕಾಂಗ್ರೆಸ್ ನ ಬ್ಲಾಕ್ ಮಹಿಳಾ ಅಧ್ಯಕ್ಷೆ ಶುಭಾಮಂಗಳ, ಕವಿತಾ ಚಂದ್ರಶೇಖರ್, ರಾಜೇಶ್ವರಿ, ರಾಜು ಭಂಡಾರಿ, ಶ್ರೀಕಾಂತ್ ಬಗೇರಾ ಮತ್ತಿತರರು ಹಾಜರಿದ್ದರು.

ಶಾಮನೂರು ಶಿವಶಂಕರಪ್ಪ @ 93, ಶಾಮನೂರು ಶಿವಶಂಕರಪ್ಪರ ಜನುಮದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು, ಶಾಮನೂರು ಶಿವಶಂಕರಪ್ಪರ ಹುಟ್ಟುಹಬ್ಬ,

Shamanuru Shivashankarappa News,

Shamanuru Shivashankarappa birthday

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment