SUDDIKSHANA KANNADA NEWS/ DAVANAGERE/ DATE:21-10-2023
ದಾವಣಗೆರೆ: ರಾಜ್ಯ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಸೂಕ್ತ ಸ್ಥಾನ ಮಾನ ಸಿಕ್ಕಿಲ್ಲ ಎಂದು ಸಿಡಿದೆದ್ದಿದ್ದ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರು ಈಗ ತಣ್ಣಗಾಗಿದ್ದಾರೆ.
READ ALSO THIS STORY:
Channagiri: ಕಾಂಗ್ರೆಸ್ ಶಾಸಕನ ವಿರುದ್ಧ ಸ್ವಪಕ್ಷದ ಮುಖಂಡನ ರೋಷಾವೇಶ, ಕೆಲ್ಸ ಮಾಡದಿದ್ದರೆ ರಾಜೀನಾಮೆ ಕೊಡು, 5 ಸಾವಿರ ಮತ ಪಡೆ ನೋಡೋಣ: ಶಿವಗಂಗಾ ಬಸವರಾಜ್ ಗೆ ಹೊದಿಗೆರೆ ರಮೇಶ್ ಸವಾಲು
ಎಲ್ಲವೂ ಮುಗಿದಿದೆ. ಪದೇ ಪದೇ ಯಾಕೆ ಇದೇ ಪ್ರಶ್ನೆ ಕೇಳ್ತೀರಾ. ವರ್ಷಪೂರ್ತಿ ಇರುತ್ತದೆಯಾ? ಅಧಿಕಾರಿಗಳು ವರ್ಗಾವಣೆ ಆಗಿ ಹೋಗುತ್ತಾರೆ ಅಲ್ಲವೇ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಸಮಾಧಾನವೇನಿಲ್ಲ, ಎಲ್ಲಾ ಸಮಸ್ಯೆ ಸದ್ಯಕ್ಕೆ ಪರಿಹಾರವಾಗಿದೆ. ಯಾಕೆ ಇದೇ ಪ್ರಶ್ನೆಯನ್ನು ಮಾಧ್ಯಮದವರು ಕೇಳುತ್ತೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಮನೂರು ಶಿವಶಂಕರಪ್ಪರಿಗೆ ಗೌರವ:
ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರಿಗೆ ವಿಜಯಪುರದ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು.
ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ದಿಂದ ಬಿಎಲ್ಡಿಇ ಸಭಾಂಗಣದಲ್ಲಿ ನಡೆದ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಶಾಮನೂರು ಶಿವಶಂಕರಪ್ಪನವರ ಸಮಾಜ ಸೇವೆ ಮತ್ತು ಶಿಕ್ಷಣ ಸೇವೆಯನ್ನು ಗುರುತಿಸಿ ಈ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮತ್ತು ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶಾಮನೂರು
ಶಿವಶಂಕರಪ್ಪನವರಿಗೆ ಪದವಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಆರ್.ಎಸ್.ಮುಧೋಳ್, ಸಮಕುಲಾಧಿಪತಿಗಳಾದ ವೈ.ಎಂ. ಜಯರಾಜ್, ಅರುಣ್ ಸಿ.ಇನಾಂದಾರ್, ವಿಧಾನಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್, ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಸೆಸ್ಗೆ 4 ಗೌರವ ಡಾಕ್ಟರೇಟ್: ಶಾಮನೂರು ಶಿವಶಂಕರಪ್ಪನವರ ಸಮಾಜಸೇವೆ ಮತ್ತು ಶಿಕ್ಷಣ ಸೇವೆಯನ್ನು ಗುರುತಿಸಿ ಇದುವರೆಗೂ ಒಟ್ಟು 4 ಗೌರವ ಡಾಕ್ಟರೇಟ್ ಗಳು ಸಂದಿವೆ.
15 ವರ್ಷಗಳ ಹಿಂದೆ ಮೊದಲ ಬಾರಿಗೆ ಕುವೆಂಪು ವಿಶ್ವವಿದ್ಯಾಲಯ ನಂತರ ದಾವಣಗೆರೆ ವಿಶ್ವವಿದ್ಯಾಲಯ, ಕಳೆದ 2 ವರ್ಷಗಳ ಹಿಂದೆ ಶರಣ ಬಸವ ಡೀಮ್ಡ್ ವಿಶ್ವವಿದ್ಯಾಲಯ ಹಾಗೂ ಇಂದು ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಜಾಹೀರಾತು:
ವಧು ವರ ಮಾಹಿತಿ ಕೇಂದ್ರ
ನಮ್ಮಲ್ಲಿ ಎಲ್ಲಾ ಜಾತಿಯವರು ಹಾಗೂ ಎಲ್ಲಾ ವರ್ಗವದರು ಇದ್ದಾರೆ. ಮೊದಲ ಹಾಗೂ ಎರಡನೇ ಮದುವೆಗೆ ಹಾಗೂ ನಮ್ಮಲ್ಲಿ 2 ಲಕ್ಷ ಪ್ರೊಫೈಲ್ ಇದೆ. ನಿಮ್ಮಲ್ಲಿ ಎಂಥ ಸಮಸ್ಯೆ ಇದ್ದರೂ ಕೇವಲ ಮೂರು ತಿಂಗಳಲ್ಲಿ ಮದುವೆ ಹೊಂದಿಸಿ ಕೊಡುತ್ತೇವೆ ಹಾಗೂ ಅಂತರಜಾತಿ ಮದುವೆ ಹೆಚ್ಚಾಗಿ ಮಾಡಿಸುತ್ತೇವೆ. ಒಮ್ಮೆ ಭೇಟಿ ಕೊಡಿ ಅಥವಾ ಕರೆ ಮಾಡಿ ಮೊಬೈಲ್ ನಂಬರ್: 99455 00051, ವಾಟ್ಸಪ್ ನಂಬರ್ 98443 50220.