ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೈ ಆಡಳಿತದಲ್ಲಿ ಯಾವುದೂ ಸರಿಯಿಲ್ಲ, ಹೊಂದಾಣಿಕೆಯೂ ಇಲ್ಲ: ಶಾಮನೂರು ಶಿವಶಂಕರಪ್ಪ(Shamanuru Shivashankarappa)ರ ಅಸಮಾಧಾನದ ಗಂಭೀರ ಎಂದ ಬೊಮ್ಮಾಯಿ

On: October 1, 2023 10:30 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-10-2023

ಹಾವೇರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾವೂದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆ ಇಲ್ಲ. ಸರ್ಕಾರ ಗೊಂದಲದ ಗೂಡಾಗಿದೆ. ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಶಾಮನೂರು ಶಿವಶಂಕರಪ್ಪ
ಅವರ ಹೇಳಿಕೆ ಗಂಭೀರವಾದದ್ದು. ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು. ಅಖಿಲ ಭಾರತ ವಿರಶೈವ ಮಹಾಸಭಾದ ಅಧ್ಯಕ್ಷರು. ಅವರ ಹೇಳಿಕೆಯನ್ನು ಜನ ಗಂಭೀರವಾಗಿ ಪರಿಗಣನೆ ಮಾಡುತ್ತಾರೆ. ಮುಖ್ಯಮಂತ್ರಿಗಳು ಅವರಿಗೆ ಸ್ಪಷ್ಟವಾದ ಉತ್ತರ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Read Also This Story:

Davanagere: ನಮ್ಮವರಿಗೆ ಅನ್ಯಾಯವಾದ್ರೆ ಸುಮ್ಮನಿರಬೇಕಾ? ಸಿಡಿದೆದ್ದ ಶಾಮನೂರು ಶಿವಶಂಕರಪ್ಪ, ರಾಜ್ಯದಲ್ಲಿ ವೀರಶೈವ ಲಿಂಗಾಯತರೇ ಹೆಚ್ಚಿರುವುದು, ನಾನು ಯಾರಿಗೂ ಹೆದರಲ್ಲ: ಸಿಎಂಗೆ ಎಸ್ಎಸ್ ಟಾಂಗ್

ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರ ಹೇಳಿಕೆ ಬಳಿಕವೂ ನಮ್ಮ ಹೇಳಿಕೆಗೆ ಬದ್ದ ಅನ್ನುವುದನ್ನು ನೋಡಿದರೆ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಹೇಳಿಕೆ ಬಹಳ ಗಂಭಿರವಾಗಿದೆ ಎಂದು ಹೇಳಿದರು.

ಪ್ರತಿದಿನ ಈ ಸರ್ಕಾರದ ಮಂತ್ರಿಗಳು ಒಂದಿಲ್ಲೊಂದು ಗೊಂದಲದ ಹೇಳಿಕೆ ಕೊಡುವುದನ್ನು ನೋಡಿದರೆ, ಈ ಸರ್ಕಾರದ ಒಳಗಡೆ ಯಾವದೂ ಸರಿ ಇಲ್ಲ ಸರ್ಕಾರ ಗೊಂದಲದ ಗೂಡಾಗಿದೆ, ಸಚಿವರ ನಡುವೆ ಒಬ್ಬರಿಗೊಬ್ಬರ ಸಹಕಾರ ಇಲ್ಲ. ಕ್ಯಾಬಿನೆಟ್ ನಲ್ಲಿ ಒಕ್ಕಟ್ಟಿಲ್ಲ ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲಿ ಆಕ್ರೋಶ ಇದೆ. ಕರ್ನಾಟಕದ ಜನರಿಗೆ ಈ ಸರ್ಕಾರದ ಇದೆ ಎಂಬ ಭಾವನೆ ಇಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಬರ ಬಂದರೆ ನೆರವಿಲ್ಲ, ಕಾವೇರಿ ವಿಚಾರದಲ್ಲಿ ನೆರವಾಗುತ್ತಿಲ್ಲ. ನಾಲ್ಕು ತಿಂಗಳಲ್ಲಿ ಈ ಸರ್ಕಾರ ಜನರ ಪ್ರೀತಿಯನ್ನು ಕಳೆದಕೊಂಡಿದೆ. ಸಚಿವರ ಮೇಲೆ ಮುಖ್ಯಮಂತ್ರಿಗಳ‌ ನಿಯಂತ್ರಣ ಇಲ್ಲ ಎಂದರು.

ಕಾವೇರಿ ವಿಚಾರದಲ್ಲಿ ಗೊಂದಲ:

 

ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿಗಳು ನ್ಯಾಯಮೂರ್ತಿಗಳ ಸಭೆಯಲ್ಲಿ ಒಂದು ಹೇಳುತ್ತಾರೆ, ಹೊರಗೊಂದು ಹೇಳುತ್ತಾರೆ‌. ನಿನ್ನೆ ನ್ಯಾಯಮೂರ್ತಿಗಳ ಮಿಟಿಂಗ್ ನಲ್ಲಿ ನಾವು ಅಪೀಲ್ ಹೋಗುತ್ತೇವೆ. ನೀರು ನಿಲ್ಲಿಸುತ್ತೇವೆ ಅಂತಾ ಸಭೆಯಲ್ಲಿ ಹೇಳಿದ್ದರು. ಆದರೆ, ಹೊರಗಡೆ ಬಂದು ಅಪೀಲ್ ಹೋಗುತ್ತೇವೆ ಆದರೆ, ನೀರು ನಿಲ್ಲಿಸಲು ಆಗುವುದಿಲ್ಲ ಅಂತ ಹೇಳಿದ್ದಾರೆ.‌ ಯಾಕೇ ನಿಲ್ಲಿಸಲು ಆಗಲ್ಲ ಎಂದು ಪ್ರಶ್ನಿಸಿದರು‌.

ನೀರು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆಗುತ್ತದೆ‌. ಸರ್ಕಾರ ವಜಾ ಆಗುತ್ತೆ, ಡ್ಯಾಂ ವಶಪಡಿಸಿಕೊಳ್ಳುತ್ತಾರೆ ಅಂತ ಮುಖ್ಯಮಂತ್ರಿ ಗಳು ಹೇಳುತ್ತಾರೆ. ನೀವು ಇನ್ನೂ ಸುಪ್ರೀಂಕೋರ್ಟ್ ಗೆ ಹೋಗುವುದಿದೆ. ಅಲ್ಲಿಗೆ ಹೋಗುವ ಮುನ್ನ ಹೆದರಿಕೊಂಡು ಈ ತರಹ ಹೇಳಿಕೆ ಕೊಟ್ಟರೆ, ನೀರು ಬಿಡುವಂತೆ ಕೋರ್ಟ್ ಹೇಳುತ್ತದೆ. ಮುಖ್ಯಮಂತ್ರಿಗಳಿಗೆ ಅಷ್ಟಾದರೂ ವ್ಯವಧಾನ ಬೇಡವೇ ? ಈ ಸರ್ಕಾರ ಈ ತರಹ ದ್ವಂದ್ವ ನೀತಿ ನಡೆದುಕೊಂಡು ಬಂದಿದೆ. ರಾಜ್ಯದ ನೆಲ ಜಲ ಉಳಿಸಲು ಈ ಸರ್ಕಾರದಿಂದ ಸಾಧ್ಯ ಇಲ್ಲ ಅನ್ನುವುದು ಜನರಿಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment