ದಾವಣಗೆರೆ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಆಗಸ್ಟ್ ತಿಂಗಳ ಆಗಸ್ಟ್ 11 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಸ್ವಯಂ ಉದ್ಯೋಗಿಗಳಾಗಲು ಇಚ್ಚಿಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಭಾಗವಹಿಸಬಹುದು.
READ ALSO THIS STORY: ಮದುವೆಗೆ ವೈಯಕ್ತಿಕ ಸಾಲ ತೆಗೆದುಕೊಳ್ಳಲು ಯೋಚಿಸುತ್ತಿದ್ದೀರಾ: ಸಾಧಕ-ಬಾಧಕಗಳ ಡೀಟೈಲ್ಸ್
ಆಸಕ್ತಿಯುಳ್ಳ ಶಿಬಿರಾರ್ಥಿಗಳು ಆಗಸ್ಟ್ 6 ರಂದು ಬೆಳಗ್ಗೆ 9 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 9505894247, 8970476050, 9591514154, 9686248369, 8970446644 ಗಳಿಗೆ ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.