ಶಿವಮೊಗ್ಗ: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಅಕ್ಟೋಬರ್ 29 ರಂದು ಬೆಳಿಗ್ಗೆ 10:00 ಗಂಟೆಗೆ ಉಚಿತ ‘ಉದ್ಯೋಗ ಮೇಳ’ (Job Fair) ಹಾಗೂ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕವೇ ಕಂಪನಿಗೆ ಆಯ್ಕೆ ಮಾಡಿಕೊಳ್ಳಲಿವೆ. ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರು ಈ ಉಚಿತ ಮೇಳದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಉದ್ಯೋಗಾಧಿಕಾರಿ ಕೋರಿದ್ದಾರೆ.
ದಿನಾಂಕ ಮತ್ತು ಸಮಯ: ಅಕ್ಟೋಬರ್ 29, 2026 ರಂದು ಬೆಳಿಗ್ಗೆ 10:00 ಗಂಟೆಗೆ ಪ್ರಾರಂಭವಾಗಲಿದೆ.
ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಪಿ.ಯು.ಸಿ. (PUC), ಐಟಿಐ (ITI), ಡಿಪ್ಲೋಮಾ (Diploma) ಹಾಗೂ ಯಾವುದೇ ಪದವಿ (Degree) ಪೂರ್ಣಗೊಳಿಸಿರುವ 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಬಹುದು.
ಅಗತ್ಯ ದಾಖಲೆಗಳು: ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ (Resume/CV) ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಪ್ರವೇಶ ಉಚಿತವಾಗಿರುತ್ತದೆ.
ಸಂಪರ್ಕ ಸಂಖ್ಯೆ: ಹೆಚ್ಚಿನ ವಿವರಗಳಿಗಾಗಿ ನೇರವಾಗಿ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 9380663606 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.





Leave a comment