Site icon Kannada News-suddikshana

ಶಿರಾಡಿ ಘಾಟ್‌ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: ಮತ್ತೆ ಸಂಚಾರ ಸ್ಥಗಿತ

ಗುಡ್ಡ ಏಕಾಏಕಿ ಕುಸಿತಗೊಂಡ ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ. ಮಾಹಿತಿ ತಿಳಿದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜುಲೈ 18 ರಂದು ಸಕಲೇಶಪುರದ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬಳಿಕ ಜುಲೈ 19ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದಿತ್ತು.

ಆದರೆ, ಜಿಲ್ಲಾಡಳಿತವು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಹಿಂಪಡೆಯುವುದರೊಂದಿಗೆ ಕೆಲ ಷರತ್ತುಗಳಡಿ ವಾಹನ ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು. ಅಂದರೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿತ್ತು.

Exit mobile version