ಬೆಂಗಳೂರು: ಹಿಂದಿ ನಮ್ಮ ರಾಷ್ಟ್ರ ಭಾಷೆ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದರಿಂದ ಸ್ಯಾಂಡಲ್‌ವುಡ್ ಖ್ಯಾತ ನಟ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ಮುಂಬರುವ ಪ್ಯಾನ್-ಇಂಡಿಯಾ ಚಿತ್ರ ‘ಒರಿಜಿನಲ್ ಮಾನ್ಸ್‌ಟರ್’ ಟೈಟಲ್ ಲಾಂಚ್ ಕಾರ್ಯಕ್ರಮದ ವೇಳೆ ಹಿಂದಿ ಭಾಷೆಯ ಬಗ್ಗೆ ಮಾತನಾಡುತ್ತಾ, ಹಿಂದಿ ರಾಷ್ಟ್ರೀಯ ಭಾಷೆ ಎಂದು ಅವರು ಹೇಳಿಕೆ ನೀಡಿದ್ದರು. ಈ ಮಾತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಹಾಗೂ ವಿವಾದಕ್ಕೆ ಗ್ರಾಸವಾಗಿತ್ತು.
ವಿವಾದ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ನಟ ಶಿವರಾಜ್‌ಕುಮಾರ್ ತಕ್ಷಣವೇ ಸ್ಪಷ್ಟನೆ ನೀಡಿದ್ದು, ತಾವು ಆಡಿದ ಮಾತಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
“ನಾನು ಆಕಸ್ಮಿಕವಾಗಿ ಹಿಂದಿ ರಾಷ್ಟ್ರೀಯ ಭಾಷೆ ಎಂದುಬಿಟ್ಟೆ. ಅದು ಭಾರತದ ಭಾಷೆಗಳಲ್ಲಿ ಒಂದು ಎಂದು ಹೇಳಲು ಹೋಗಿ ಗೊಂದಲಕ್ಕೊಳಗಾದೆ. ನಮ್ಮ ಮಾತೃಭಾಷೆ ಕನ್ನಡ ನಮಗೆ ಎಂದೆಂದಿಗೂ ಮುಖ್ಯ. ಯಾರಿಗಾದರೆ ನೋವಾಗಿದ್ದರೆ ಕ್ಷಮಿಸಿ” ಎಂದು ಸ್ಪಷ್ಟಪಡಿಸಿದ್ದಾರೆ. ಆರ್. ಚಂದ್ರು ನಿರ್ದೇಶನದ ಈ ಚಿತ್ರದ ಮೂಲಕ ಶಿವರಾಜ್‌ಕುಮಾರ್ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.





Leave a comment