Home ಕ್ರೈಂ ನ್ಯೂಸ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ನಿರ್ಲಕ್ಷ್ಯ ಆರೋಪ: 12 ವರ್ಷದ ವಿದ್ಯಾರ್ಥಿನಿ ಶ್ವೇತಾ ದುರಂತ ಅಂತ್ಯ!
ಕ್ರೈಂ ನ್ಯೂಸ್ಬೆಂಗಳೂರು

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ನಿರ್ಲಕ್ಷ್ಯ ಆರೋಪ: 12 ವರ್ಷದ ವಿದ್ಯಾರ್ಥಿನಿ ಶ್ವೇತಾ ದುರಂತ ಅಂತ್ಯ!

Share
ಶಿವಮೊಗ್ಗ
Share

ಶಿವಮೊಗ್ಗ: ಇಲ್ಲಿನ ರಾಗಿಗುಡ್ಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಶ್ವೇತಾ (12) ಸೂಕ್ತ ಚಿಕಿತ್ಸೆ ಸಿಗದೆ ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಮೂಲತಃ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಳಿಯಾಳ ಮಟ್ಟಿಕ್ಯಾಂಪ್ ನಿವಾಸಿಯಾದ ಈ ಬಾಲಕಿ, ಕಳೆದ ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು.

ಆಸ್ಪತ್ರೆಯಲ್ಲಿ ನಡೆದಿದ್ದೇನು?

ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿಯು ಬಾಲಕಿಯನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿತ್ತು. ಸುಮಾರು 6 ದಿನಗಳ ಕಾಲ ಚಿಕಿತ್ಸೆ ನೀಡಲಾಗಿದ್ದು, ಬಾಲಕಿಗೆ ಕಿಡ್ನಿ ಸಮಸ್ಯೆ ಎದುರಾಗಿ ವೆಂಟಿಲೇಟರ್ ಸಹಾಯ ಪಡೆಯಲಾಗಿತ್ತು. ಆದರೆ, ಡಯಾಲಿಸಿಸ್‌ಗೆ ಅಗತ್ಯವಿದ್ದ ‘ಟ್ಯೂಬಿಂಗ್ ಸೆಟ್’ ಆಸ್ಪತ್ರೆಯಲ್ಲಿ ಲಭ್ಯವಿರಲಿಲ್ಲ ಮತ್ತು ತುರ್ತು ಔಷಧಿಗಳನ್ನು ಹೊರಗಿನ ಖಾಸಗಿ ಮೆಡಿಕಲ್ ಶಾಪ್‌ಗಳಿಂದ ತರಬೇಕಾಯಿತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮಾರ್ಗಮಧ್ಯದಲ್ಲೇ ಕೊನೆಯುಸಿರು:

ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದ ಕಾರಣ ವೈದ್ಯರ ಸಲಹೆಯಂತೆ ಖಾಸಗಿ ಅಂಬುಲೆನ್ಸ್‌ನಲ್ಲಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವಾಗ ಬಾಲಕಿ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾಳೆ. ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯವೇ ಮಗಳ ಸಾವಿಗೆ ಕಾರಣ ಎಂದು ಪೋಷಕರು ಕಣ್ಣೀರಿಡುತ್ತಿದ್ದು, ಪ್ರಕರಣದ ಕುರಿತು ಉನ್ನತ ಮಟ್ಟದ ಸಮಗ್ರ ತನಿಖೆಯಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles