SUDDIKSHANA KANNADA NEWS/DAVANAGERE/DATE:14_12_2025
ಬೆಂಗಳೂರು: ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ.
ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.





Leave a comment