ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜನಪರ ಕೆಲಸ ಮಾಡಿದವರಿಗೆ ಟಿಕೆಟ್ ಸಿಗುತ್ತೆ, ಕೇಂದ್ರದ ನಾಯಕರು ಇದಕ್ಕೆ ಸಮ್ಮತಿ ಕೊಡುತ್ತಾರೆ: ಶೋಭಾ ಕರಂದ್ಲಾಜೆ ಈ ಮಾತಿನ ಮರ್ಮವೇನು…?

On: March 31, 2023 10:43 AM
Follow Us:
---Advertisement---

SUDDIKSHANA KANNADA NEWS/ DAVANAGERE

DATE:31-03-2023

ದಾವಣಗೆರೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP)ಗೆ ಸ್ಪಷ್ಟ ಬಹುಮತ ಸಿಗುತ್ತದೆ ಎಂಬ ವಿಶ್ವಾಸ ಇದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ (NARENDRA MODI) ಅವರ ಕೈ ಬಲಪಡಿಸಲು ಇನ್ನೊಂದು ಶಕ್ತಿಯನ್ನು ರಾಜ್ಯದ ಜನತೆ ನೀಡುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ (SHOBHA) ಕರಂದ್ಲಾಜೆ ಹೇಳಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿರಿಯರ ಅಪೇಕ್ಷೆ ಮೇರೆಗೆ ಕಾರ್ಯಕರ್ತರ ಅಭಿಪ್ರಾಯ ಕೇಳಿ ಟಿಕೆಟ್ (TICKET) ಹಂಚಿಕೆ ಮಾಡಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ. ಬೂತ್ ಮೇಲ್ಪಟ್ಟ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಪ್ರಾಯ ತಿಳಿಸಲು ಅವಕಾಶ ನೀಡಿದ್ದೇವೆ. ಜನಪರವಾದ ಕೆಲಸ ಮಾಡಿದವರಿಗೆ ಟಿಕೆಟ್ ಸಿಗುತ್ತೆ. ಕೇಂದ್ರದ ನಾಯಕರು ಇದಕ್ಕೆ ಸಮ್ಮತಿ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಪ್ರಧಾನಿ (PRIME MINISTER) ಎಲ್ಲೆ ಪ್ರವಾಸ ಮಾಡಿದರೂ ಡಬಲ್ ಎಂಜಿನ್ ಸರ್ಕಾರದ ಸಾಧನೆ ಬಗ್ಗೆ ಮಾತನಾಡುತ್ತಾರೆ. ದೇಶದ ರಕ್ಷಣೆ, ವಿದೇಶಗಳಲ್ಲಿ ಗೌರವ ಸಿಗಲು ಎರಡೂ ಕಡೆ ಬಿಜೆಪಿ (BJP) ಸರ್ಕಾರ ಇರಬೇಕು. ಇಲ್ಲಿ ಮಾಡಿರುವ ಕೆಲಸಗಳೇ ನಮಗೆ ಶ್ರೀರಕ್ಷೆ ಎಂದು ತಿಳಿಸಿದರು.

ಪ್ರಜಾತಂತ್ರ, ಪ್ರಜಾಪ್ರಭುತ್ವದಡಿ ನಡೆಯುವ ಪಕ್ಷ ಅಂದರೆ ಬಿಜೆಪಿ (BJP). ಬೂತ್ ಪ್ರಮುಖರು, ಶಕ್ತಿ ಕೇಂದ್ರ, ಪೇಜ್ ಪ್ರಮುಖರು, ಜಿ. ಪಂ. ಮಟ್ಟ, ಜಿಲ್ಲೆಗಳ ಟೀಂಗಳನ್ನು ಕೇವಲ ಚುನಾವಣೆಗಾಗಿ ಮಾಡುವುದಿಲ್ಲ. ವರ್ಷಪೂರ್ತಿ ಕೆಲಸ ಮಾಡುತ್ತವೆ. ಸರ್ಕಾರ ಇದ್ದಾಗ ಸಾಧನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಕೊಂಡು ಬಂದಿವೆ. ಅಧಿಕಾರ ಇಲ್ಲದ ಸಂದರ್ಭದಲ್ಲಿ ಜನರ ಧ್ವನಿಯಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಪಕ್ಷಕ್ಕೆ
ಕಾರ್ಯಕರ್ತರೇ ಶಕ್ತಿ ಎಂದರು.

ಮೀಸಲಾತಿ ಸಂಬಂಧ ಕಳೆದ 30 ವರ್ಷದಿಂದ ಪರಿಶಿಷ್ಟ ಜಾತಿ, ಪಂಗಡದವರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಲ್ಪಸಂಖ್ಯಾತರ ಓಲೈಕೆಗಾಗಿ ಧರ್ಮದ ಆಧಾರದ ಮೇಲೆ ಮುಸ್ಲಿಂರಿಗೆ ಹೆಚ್ಚಿನ ಮೀಸಲಾತಿ ನೀಡಲಾಗಿತ್ತು. ಮೂರು ಪ್ರವರ್ಗಗಳಲ್ಲಿಯೂ ಸೇರಿದ್ದರು. ಸಂವಿಧಾನದ ಪ್ರಕಾರ ಮೀಸಲಾತಿಯನ್ನು ಧರ್ಮದ ಆಧಾರದಲ್ಲಿ ಕೊಡಬಾರದು. ಜಾತಿ ಆಧಾರ, ಹಿಂದುಳಿದವರು, ಸಮಸ್ಯೆ ಆಧರಿಸಿ ಮೀಸಲಾತಿ ನೀಡಬೇಕಿತ್ತು. ಯಾವ ಮೀಸಲಾತಿಯನ್ನು ಸಂವಿಧಾನ ಬಾಹಿರವಾಗಿ ಕಾಂಗ್ರೆಸ್, ಜೆಡಿಎಸ್ ಅಲ್ಪಸಂಖ್ಯಾತರಿಗೆ ಕೊಟ್ಟದ್ದನ್ನು ನಾವು ತೆಗೆದು ಹಾಕಿದ್ದೇವೆ. ವೀರಶೈವ ಲಿಂಗಾಯತರು, ಒಕ್ಕಲಿಗರಿಗೆ ಮೀಸಲಾತಿ ನೀಡಲಾಗಿದೆ. ಅದೇ ರೀತಿಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆ ಈಡೇರಿಸಲಾಗಿದೆ. ಸಂವಿಧಾನದ ಅಡಿಯಲ್ಲಿಯೇ ಮೀಸಲಾತಿ ನೀಡಲಾಗಿದೆ ಎಂದು ಒಳಮೀಸಲಾತಿಯನ್ನು ಸಮರ್ಥಿಸಿಕೊಂಡರು.

ಲಂಬಾಣಿ, ಕೊರಚ, ಕೊರಮ, ಬೋವಿ ಸಮಾಜಕ್ಕೆ ಈ ಹಿಂದೆ ಸರಿಯಾಗಿ ಮೀಸಲಾತಿ ಸಿಗುತ್ತಿರಲಿಲ್ಲ. ಮೂರು ಜನ ಆಯ್ಕೆಯಾಗಿದ್ದರೆ ಒಬ್ಬರಿಗೆ ಮಾತ್ರ ಸಿಗುತಿತ್ತು. ಒಳಮೀಸಲಾತಿ ತಂದು ಶೇಕಡಾ 4.5ರಷ್ಟು ನೀಡಲಾಗಿದೆ. ಕಾಂಗ್ರೆಸ್ (CONGRES) ಸಮಾಜದಲ್ಲಿ ತಪ್ಪು ಸಂದೇಶ ಕೊಡುತ್ತದೆ. ಮೀಸಲಾತಿ ಕಿತ್ತುಕೊಂಡಿದ್ದಾರೆ ಎಂಬ ಆರೋಪ ಸುಳ್ಳು ಮಾಡುತ್ತಿದೆ. ಈ ಹಿಂದೆ ಲಂಬಾಣಿ, ಬೋವಿ ಜನಾಂಗಕ್ಕೆ ಶೇಕಡಾ 1 ರಷ್ಟು ಮೀಸಲಾತಿ ಸಿಗುತ್ತಿರಲಿಲ್ಲ. ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ, ವಿದ್ಯಾಭ್ಯಾಸದಲ್ಲಿ ಸಹಾಯ ಆಗಿದೆಯಾ? ಧ್ವನಿ ಇಲ್ಲದ ಸಮುದಾಯಕ್ಕೆ ಧ್ವನಿ ಕೊಡುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಈ ಹಿಂದೆ ಅಧಿಕಾರ ನಡೆಸಿದವರು ಯಾಕೆ ಧೈರ್ಯ ತೋರಲಿಲ್ಲ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ (AMITH SHA) ಅವರು ಮೀಸಲಾತಿಯನ್ನು ವೇಗದಲ್ಲಿ ಜಾರಿಗೊಳಿಸಲು ಶಕ್ತಿ ಕೊಟ್ಟಿದ್ದಕ್ಕೆ ಧನ್ಯವಾದ ಅರ್ಪಿಸುತ್ತೇವೆ ಎಂದ ಅವರು, ಬಂಜಾರ, ಬೋವಿ ಜನಾಂಗ ಆತಂಕಕ್ಕೊಳಗಾಗಬಾರದು. ಈ ಹಿಂದೆ ಹೆಚ್ಚಿನ ಶಾಸಕರು, ಶತಕ್ತಿಶಾಲಿಯಿದ್ದ ಸಮಾಜವೇ ಶೇ. 15ರಷ್ಟು ಮೀಸಲಾತಿ ಪಡೆಯುತಿತ್ತು. ಹೆಚ್ಚು ಧ್ವನಿ ಇದ್ದವರ ಪಾಲಾಗುತಿತ್ತು. ಅದನ್ನು ತಪ್ಪಿಸಿದ್ದೇವೆ. ಬೋವಿ, ಕೊರಚ, ಬಂಜಾರ (BANJARA) ಸಮಾಜದವರು ಇನ್ನು ಮುಂದೆ ಹೆಚ್ಚಿನ ಮೀಸಲಾತಿ ಸಿಗುತ್ತೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ವರುಣಾನೂ ಬೇಡ, ರಾಜಕೀಯವೂ ಬೇಡ:

ಇನ್ನು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಬಿ. ವೈ. ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಕುರಿತಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಲು ಶೋಭಾ ಕರಂದ್ಲಾಜೆ ನಿರಾಕರಿಸಿದರು. ಬಳಿಕ ವರುಣಾನೂ ಬೇಡ, ರಾಜಕೀಯವೂ ಬೇಡ ಎನ್ನುತ್ತಲೇ ಹೊರಟರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment