ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Shobha Karandlaje: ನಾನು ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ: ಶೋಭಾ ಕರಂದ್ಲಾಜೆ ಸ್ಪಷ್ಟನೆ

On: October 23, 2023 5:00 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:23-10-2023

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje)  ನೇಮಕ ಆಗುತ್ತಾರೆ ಎಂಬ ಸುದ್ದಿ ನಡುವೆಯೇ ಈ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಸ್ವತಃ ಅವರೇ ಮಾಡಿದ್ದಾರೆ.

Read Also This Story:

Bangalore: ಬಿಗ್ ಬಾಸ್ ವರ್ತೂರು ಸಂತೋಷ್ ಗೆ ಬಿಗ್ ಶಾಕ್: ಅರಣ್ಯಾಧಿಕಾರಿಗಳು ಸಂತೋಷ್ ಬಂಧಿಸಿದ್ಯಾಕೆ…?

ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿ ಅಲ್ಲಿ ಕೆಲಸ ಮಾಡುತ್ತಿದ್ದೇನೆ. ಸಂತೋಷ ಇದೆ. ಮತ್ತೆ ರಾಜ್ಯ ರಾಜಕಾರಣಕ್ಕೆ ಸದ್ಯಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ನಾನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸದಸ್ಯಳಾಗಿದ್ದೇನೆ. ಕೇಂದ್ರ ಸರ್ಕಾರದ ಸಂಪುಟದಲ್ಲಿ ಇದ್ದೇನೆ. ಇಲ್ಲಿಯೇ ಉತ್ತಮ ಅವಕಾಶಗಳಿವೆ. ನಾನು ಬಿಜೆಪಿ ರಾಜ್ಯಾಧ್ಯಕ್ಷಳಾಗುತ್ತೇನೆ ಎಂಬ ಸುದ್ದಿ ಹೇಗೆ ಹರಡುತ್ತದೆಯೋ ಗೊತ್ತಿಲ್ಲ. ಈ ಬಗ್ಗೆ ಹೆಚ್ಚು ಮಾತನಾಡಲಾರೆ. ಶೀಘ್ರದಲ್ಲಿಯೇ ರಾಜ್ಯ ಬಿಜೆಪಿಗೆ ನೂತನ ಸಾರಥಿ ನೇಮಕ ಆಗಲಿದ್ದಾರೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದರು.

ನಾನು ಕೇಂದ್ರ ಸಚಿವೆಯಾಗಿ ಮತ್ತಷ್ಟು ಉತ್ತಮ ಕೆಲಸ ಮಾಡಬೇಕೆಂದುಕೊಂಡಿದ್ದೇನೆ. ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಬೇಕು. 2024ರ ಲೋಕಸಭೆ ಚುನಾವಣೆಯಲ್ಲಿಯೂ ಎನ್ ಡಿ ಎ ಭರ್ಜರಿ ದಿಗ್ವಿಜಯ ಸಾಧಿಸಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂದು ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಮತ್ತೆ ಮೋದಿ ಅವರು ಪ್ರಧಾನಿಯಾಗುವುದು ನಿಶ್ಚಿತ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸಾಕಷ್ಟು ಚರ್ಚೆ ನಡೆಯುತ್ತಿದೆ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪರ ಪುತ್ರ ಬಿ. ವೈ. ವಿಜಯೇಂದ್ರ, ಮಾಜಿ ಸಚಿವ ಸಿ. ಟಿ. ರವಿ, ಅಶ್ವತ್ಥನಾರಾಯಣ್, ಆರ್. ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರ ಹೆಸರು ಮುನ್ನೆಲೆಗೆ ಬಂದಿತ್ತು. ಆದ್ರೆ, ಬಿಜೆಪಿ ಹೈಕಮಾಂಡ್ ಮನಸ್ಸಿನಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಾಗುತ್ತಿಲ್ಲ. ಈ ಬೆಳವಣಿಗೆ ನಡುವೆ ಶೋಭಾ ಕರಂದ್ಲಾಜೆ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ದಸರಾ ಹಬ್ಬದ ಮುಗಿದ ಬಳಿಕ ನೇಮಕ ಆಗುತ್ತಾರೆ ಎಂದು ಚರ್ಚೆಯಾಗಿತ್ತು. ಸುದ್ದಿಯೂ ಆಗಿತ್ತು. ಆದ್ರೆ, ಸದ್ಯಕ್ಕೆ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಶೋಭಾ ಕರಂದ್ಲಾಜೆಯವರೇ ಈ ಸುದ್ದಿಗೆ ತೆರೆ ಎಳೆದಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment