SUDDIKSHANA KANNADA NEWS / DAVANAGERE
DATE: 31-03-2023
ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ (SELECTION) ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಮತದಾನ ನಡೆಯಿತು.
ದಾವಣಗೆರೆ ಉತ್ತರ (DAVANAGERE NORTH), ದಾವಣಗೆರೆ ದಕ್ಷಿಣ (DAVANAGERE SOUTH), ಚನ್ನಗಿರಿ, (CHANNAGIRI) ಹೊನ್ನಾಳಿ (HONNALI), ಹರಿಹರ (HARIHARA) , ಮಾಯಕೊಂಡ (MAYAKONDA), ಜಗಳೂರು (JAGALURU) ಕ್ಷೇತ್ರಕ್ಕೆ ಸಂಬಂಧಿಸಿದಂತೆ ವೋಟಿಂಗ್ ನಡೆಯಿತು. ದಾವಣಗೆರೆ ಉತ್ತರ ಹಾಗೂ ದಾವಣಗೆರೆ ದಕ್ಷಿಣದಲ್ಲಿ ಹೆಚ್ಚಿನ ಆಕಾಂಕ್ಷಿಗಳಿದ್ದು, ಪ್ರಮುಖ ಮೂವರ ಹೆಸರಿಗೆ ಮತ ಅಥವಾ ಚೀಟಿಯಲ್ಲಿ ಹೆಸರು ಬರೆಯುವ ಮೂಲಕ ಅಭಿಪ್ರಾಯ ಸಂಗ್ರಹಿಸಲಾಯಿತು. ಮಾಯಕೊಂಡದಲ್ಲಿಯೂ ಹೆಚ್ಚಿನ ಆಕಾಂಕ್ಷಿಗಳಿದ್ದು, ಚನ್ನಗಿರಿಯಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿತರಾಗಿರುವ ಕಾರಣ ಬೇರೆ ಅಭ್ಯರ್ಥಿಗಳು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಈ ಕ್ಷೇತ್ರದಲ್ಲಿ ಮೂವರ ಹೆಸರು ಸಹ ಇದ್ದವು.
ಜಗಳೂರಿನಿಂದ ಎಸ್. ವಿ. ರಾಮಚಂದ್ರ (S. V. RAMACHANDRA), ಹೊನ್ನಾಳಿಯಿಂದ ಶಾಸಕ ಎಂ. ಪಿ. ರೇಣುಕಾಚಾರ್ಯ (M. P. RENUKACHARYA) ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಆದರೂ, ಈ ಕ್ಷೇತ್ರಗಳಲ್ಲಿನ ಅಭಿಪ್ರಾಯವನ್ನೂ ಸಂಗ್ರಹಿಸಲಾಯಿತು.
ದಾವಣಗೆರೆ (DAVANAGERE) ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರದ ಪ್ರಮುಖರು, ಪ್ರಭಾರಿಗಳು ಮತ ಮಾಡುವ ಮೂಲಕ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ
ವ್ಯಕ್ತಪಡಿಸಿದರು.
ಶೋಭಾ (SHOBHA) ಕರಂದ್ಲಾಜೆ ಮಾತನಾಡಿ, ಯಾರಿಗೆ ಟಿಕೆಟ್ (TICKET) ಸಿಕ್ಕರೂ ಒಟ್ಟಾಗಿ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತವಾಗಿರುವ ಅಭಿಪ್ರಾಯವನ್ನು ಬಿಜೆಪಿ ಪ್ರಮುಖರಿಗೆ ಕಳುಹಿಸಲಾಗುವುದು. ಸರ್ವೆ, ನಿಮ್ಮ ಅಭಿಪ್ರಾಯ, ಗೆಲ್ಲುವ ಸಾಧ್ಯತೆ
ಇರುವ ಅಭ್ಯರ್ಥಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಅಂತಿಮವಾಗಿ ಕೇಂದ್ರದ ಸಂಸದೀಯ ಮಂಡಳಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಯಾರಿಗೆ ಟಿಕೆಟ್ ಘೋಷಣೆಯಾದರೂ ಎಲ್ಲರೂ ಗೆಲುವಿಗೆ ಶ್ರಮಿಸಬೇಕು. ಈ ಬಾರಿಯೂ
ಮತ್ತೆ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಕರೆ ನೀಡಿದರು.
ಈ ವೇಳೆ ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕರಾದ ಎಸ್. ಎ. ರವೀಂದ್ರನಾಥ್ (S. A. RAVINDRANATH) , ಎಸ್. ವಿ. ರಾಮಚಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ಮತ್ತಿತರರು ಹಾಜರಿದ್ದರು.