SUDDIKSHANA KANNADA NEWS/ DAVANAGERE/ DATE:22-11-2024
ಬೆಂಗಳೂರು: ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನ್ ಆರ್.ಅಶೋಕಾ ಫೋಟೋ ತೆಗೆಸಿಕೊಂಡಿದ್ದೇ
ಕೊಂಡಿದ್ದು ಎಂದು ಲೇವಡಿ ಮಾಡಿದರು.
ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಲೇವಡಿ ಮಾಡಿದರು.
ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ. ಈಗ ಅವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಆಕ್ರೋಶಗೊಂಡ ಸಿಎಂ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.