Site icon Kannada News-suddikshana

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾಲ್ಮೀಕಿ

SUDDIKSHANA KANNADA NEWS/ DAVANAGERE/DATE:28_08_2025

ದಾವಣಗೆರೆ ಅಗಸ್ಟ್ 28 (ಕರ್ನಾಟಕ ವಾರ್ತೆ): ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿರವರ ಸ್ಮರಣಾರ್ಥ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ವಿದ್ಯುತ್ ಪ್ರವಹಿಸಿ ದಾವಣಗೆರೆ ಸರ್ಕಾರಿ ಕಾಲೇಜಿನ ಉಪನ್ಯಾಸಕ ದುರ್ಮರಣ: ಹಬ್ಬದ ಮನೆಯಲ್ಲೀಗ ಸೂತಕ!

ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳು ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:45, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ. ಇಲ್ಲಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 10 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ.

Exit mobile version